ಬೆಂಗಳೂರು, (ಸೆ.02); ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….