ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 02): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಿ-ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳು State scholarship Portal (Link: https://ssp.postmatric.karnataka.gov.in/) ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿಧ್ಯಾರ್ಥಿವೇತನ ಪಡೆಯಬಹುದಾಗಿದೆ.
State Scholarship Portal Homepage URL: https://ssp.postmatric.karnataka.gov.in/
Account Creation URL: https://ssp.postmatric.karnataka.gov.in/CA/
Prematric Application Submission URL: https://ssp.postmatric.karnataka.gov.in/ssppre/
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ. 03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….