ಹೊಸಕೋಟೆ, (ಸೆ.01): ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶ ಸ್ವಿಯಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಉದ್ಘಾಟನೆ ಕಾಣಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ನೀರು ಲಭ್ಯವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 28ರಂದು ಹಾಸನ ಜಿಲ್ಲೆ ಸಕಲೇಶ ಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀ ಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಡಿಸಿಎಂ ಡಿಕೆ ಶಿವಕುಮಾರ್‌ಅವರ ಜೊತೆ ತೆರಳಿ ಪರಿ ಶೀಲನೆ ನಡೆಸಿದ್ದೇವೆ.
ಒಟ್ಟು 8 ಹಳ್ಳಗಳ ಪೈಕಿ ಈಗಾ ಗಲೇ 5 ಹಳ್ಳಗಳಿಗೆ ಚಾಲನೆ ನೀಡಲಾಗಿದೆ. 1500 ಕ್ಯೂಸೆಕ್ಸ್ ನೀರನ್ನು ಮೇಲಕ್ಕೆ ಎತ್ತಲಾಗಿದೆ.
ಆ ನೀರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನವರೆಗೆ ಹರಿದು ಬರಲಿದ್ದು, ಗ್ರಾಮಾಂತರ ಜಿಲ್ಲೆಗೆ ನೀರು ಹರಿಸಲು ಒಂದು ವರ್ಷ ಬೇಕಾಗುತ್ತದೆ. ತಾಲೂಕಿನ ಕೆರೆಗಳಿಗೆ ಹರಿಸಲು ವಡ್ಡಹಳ್ಳಿ ಬಳಿ 1 ಟಿಎಂಸಿ ನೀರು ಶೇಖರಣಾ ಘಟಕ ನಿರ್ಮಿಸಲಾಗುವುದು ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….