![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು, (ಸೆ.03); ಇಂದು ನಸುಕಿನಜಾವ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಯಶವಂತಪುರದ ಮೇಲ್ಸೇತುವೆ ಮೇಲೆ ನಡೆದಿದೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಿಲಿಕಾನ್ ಸಿಟಿಯಲ್ಲಿ ಮೇಲೆ ಬೈಕ್‌ಗೆ ಕಾರು ಹಿಂಬದಿಯಿಂದ ಡಿಕ್ಕಿಯಾದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೇಲ್ವೇತುವೆಯಿಂದ ಕೆಳಕ್ಕೆ ಹಾರಿದೆ. ಭೀಕರ ಅಪಘಾತದಲ್ಲಿ ಕಾರಲ್ಲಿದ್ದ ಮೂವರು, ಬೈಕ್‌ನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯಗಳಾಗಿವೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಬೆಳಗಿನಜಾವ 3-45ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಓರ್ವ ಮಹಿಳೆ ಸೇರಿ ಐವರ ಸ್ಥಿತಿ ಗಂಭೀರವಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಹೊಯ್ಸಳ ಪೊಲೀಸರು ದೌಡಾಯಿಸಿ ಗಾಯಾಳುಗಳ ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….