ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 03): ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2024ರ  ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಙೆಯಿಮದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ  “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

2023ರ ಆಗಸ್ಟ್ 01 ರಿಂದ 2024ರ ಜುಲೈ 31 ರೊಳಗೆ ನಡೆದಿರಬೇಕು. 2006ರ ಆಗಸ್ಟ್ 01 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ  ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಮಕ್ಕಳ ದಿನಾಚರಣೆ-2024 ಸಾಲಿನ ಪ್ರಶಸ್ತಿಗಾಗಿ ನಿಗದಿ ಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 27 ರೊಳಗೆ ಸಲ್ಲಿಸತಕ್ಕದ್ದು, ಅರ್ಜಿಗಳು ಕನ್ನಡ ಭಾಷೆಯಲ್ಲಿಯೇ ಸಲ್ಲಿತಕ್ಕದ್ದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮಕ್ಕಳು ಅರ್ಜಿಯನ್ನು ಪಡೆಯಲು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ:206, 2 ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ ಸಂ: 080-29787445, ದೇವನಹಳ್ಳಿ-080-27682268, ದೊಡ್ಡಬಳ್ಳಾಪುರ-08027625228, ಹೊಸಕೋಟೆ-080-27931493, ನೆಲಮಂಗಲ-080-2772217 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]