ದೇವನಹಳ್ಳಿ, (ಸೆ.04): ಕುಂದಾಣ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪದ್ಮನಾಭ್ ಮಂಗಳವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಕುಂದಾಣ ಪಂಚಾಯಿತಿ ವ್ಯಾಪ್ತಿಯ ಖಾಸಗಿ ಲೇಔಟ್ ಒಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಭೂಗತವಾಗಿ ಕೇಬಲ್ ಅಳವಡಿಸುವ ಸಲುವಾಗಿ ವಿದ್ಯುತ್ ಗುತ್ತಿಗೆದಾರ ಮಲ್ಲಿಕಾರ್ಜುನ ಎಂಬುವವರ ಬಳಿ ರೂ.5ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಕಾಮಗಾರಿಗೆ ಅನುಮತಿ ನೀಡಲು ರೂ.3 ಲಕ್ಷ ಮುಂಗಡವಾಗಿ ಆರೋಪಿ ಪದ್ಮನಾಭ್, ಲಂಚದ ಹಣ ಪಡೆದಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಮಲ್ಲಿಕಾರ್ಜುನ ದೂರು ನೀಡಿದ್ದರು.
ಪಂಚಾಯಿತಿ ಕಾರ್ಯಾಲಯದಲ್ಲಿ ಬಾಕಿ ರೂ.2ಲಕ್ಷ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….