ಬೆಂ.ಗ್ರಾ.ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ: 19 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ, 40 ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 05): ಮಕ್ಕಳಿಗೆ ಸಂಸ್ಕಾರದ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ಕಲ್ಪಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಕರು ಸಮಾಜದ ದಾರಿ ದೀಪವಾಗಿ ಶ್ರಮಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ,

ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ರಾಷ್ಟ್ರಪತಿಗಳಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತರತ್ನ ಡಾ. ಎಸ್. ರಾಧಾಕೃಷ್ಣನ್ ರವರು ರಾಷ್ಟ್ರಪತಿಗಳಾಗಿ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು, ಉತ್ತಮ ಶಿಕ್ಷಕರಾಗಿ ದೇಶ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠರು. ಶಿಕ್ಷಕರು ಮಕ್ಕಳಿಗೆ ತಿದ್ದಿ, ಬುದ್ಧಿ ಹೇಳಿ ಒಳ್ಳೆಯ ಸಂಸ್ಕಾರ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವದರ ಮೇಲೆ ರಾಷ್ಟ್ರದ ಭವಿಷ್ಯ ನಿಂತಿದೆ. ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನ ಪಡೆಯುವ ಜತೆಗೆ ಅವರನ್ನು ಪ್ರೀತಿ ಗೌರವಿಸುವದನ್ನು ಪಾಲಿಸಿದರೆ ಜೀವನ ಉಜ್ವಲವಾಗುತ್ತದೆ ಎಂದರು.     

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಕರ ಬಡ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗಿದೆ. ರಾಜ್ಯಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗುರ್ತಿಸಲಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಜಿಲ್ಲೆಗೆ 7 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿ.ಎಸ್.ಆರ್ ಅನುದಾನವನ್ನು ಬಳಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿನ 101 ಮುಖ್ಯ ಶಾಲೆಗಳನ್ನು ಮುಂದಿನ 2 ವರ್ಷಗಳಲ್ಲಿ ನವೀಕರಣಗೊಳಿಸಲಾಗುವುದು. ಆಟದ ಮೈದಾನ, ಕುಡಿಯುವ ನೀರು ಸೌಲಭ್ಯ, ಶೌಚಾಲಯ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಆಧುನಿಕವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳ ಕಲಿಕೆಗೆ  ಪ್ರೋತ್ಸಾಹಿಸಲಾಗುವುದು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರು ಸಮಾಜಕ್ಕೆ ಅನನ್ಯ ಸೇವೆ ನೀಡಿದ್ದಾರೆ. ಮಕ್ಕಳಿಗೆ ತಂದೆ-ತಾಯಿಯ ನಂತರದ ಸ್ಥಾನದಲ್ಲಿ ಶಿಕ್ಷಕರು ನಿಂತು ಸಂಸ್ಕಾರ, ಜ್ಞಾನಾರ್ಜನೆ ತುಂಬುವ ಕೆಲಸ ಮಾಡುತ್ತಾರೆ. ಪ್ರತಿಯೊಬ್ಬ ಶಿಕ್ಷಕರು ತಮ್ಮ ಮಕ್ಕಳಂತೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕಲಿಸುವಲ್ಲಿ ಮತ್ತು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬರಲು ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಬಾಗೇಪಲ್ಲಿ ತಾಲೂಕಿನ ಸೂರಪಲ್ಲಿಯ ಆನಂದಾಶ್ರಮದ ಅಧ್ಯಕ್ಷ ಸೂರ್ಯನಾರಾಯಣಸ್ವಾಮಿ ಅವರು ವಿಶೇಷ ಉಪನ್ಯಾಸವನ್ನು ನೀಡಿದರು.

ಈ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ 19 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ 40 ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್, ಶಿವಶಂಕರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇ.ಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರ ವೃಂದ, ಸಾರ್ವಜನಿಕರು  ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]