ಗೌರಿಬಿದನೂರು, (ಸೆ.05); ಪ್ರತಿ ವ್ಯಕ್ತಿಯೂ ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಒಬ್ಬ ಗುರುವಿಗೆ ನೀಡುತ್ತಾರೆ. ಉತ್ತಮ ಶಿಕ್ಷಣ ನೀಡುವುದರ ಜೊತೆಗೆ, ಶಿಕ್ಷಣದ ಮೂಲಾರ್ಥವವನ್ನು ತಿಳಿಸಿ ಪ್ರತಿ ವ್ಯಕ್ತಿಯ ಬದಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ, ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ.
ಇಂದು ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ. ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ. ಪ್ರಸಿದ್ಧ ವಿದ್ವಾಂಸ, ಭಾರತ ರತ್ನ ಪುರಸ್ಕೃತ, ಮೊದಲ ಉಪರಾಷ್ಟ್ರಪತಿ ಮತ್ತು ಸ್ವತಂತ್ರ ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುತ್ತದೆ.
ಅಂತೆಯೆ ತಾಲೂಕಿನ ಅಲ್ಲಿಪುರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸಿದ್ದಾರೆ.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯಗಳನ್ನು ಕೋರಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ.
ಈ ವೇಳೆ ಶಾಲೆಯ ಮುಖ್ಯಶಿಕ್ಷಕಿ ಕೆಎಸ್ ವನಜಾಕ್ಷಮ್ಮ, ಶಿಕ್ಷಕರಾದ ಡಾ.ನವೀನ್ ಕುಮಾರ್ ಆರ್.ವಿ., ಎಂ.ಶ್ರೀನಿವಾಸ್, ಬಿ.ಶ್ರೀನಿವಾಸ್, ಸಬನಾಝ್, ಮುಸ್ತಾಕ್ ಅಹಮದ್, ಶಿವರಾಜ್, ಮಹದೇವಪ್ಪ, ಪಾಪಣ್ಣ, ರಾಧಮ್ಮ, ಸುಧಾ, ಮಮತಾ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….