ರಾಯಚೂರು, (ಸೆ.05); ಇಂದು ಬೆಳಗ್ಗೆ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ನಡೆದ ಸರ್ಕಾರಿ ಸಾರಿಯೆ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಖಾಸಗಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಘಟನೆ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) ಮೃತಪಟ್ಟಿದ್ದಾರೆ.
ಒಬ್ಬ ಬಾಲಕ ಹಾಗೂ ಚಾಲನಕನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳ ಕಾಲುಗಳು ತುಂಡಾಗಿವೆ.
ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಖಾಸಗಿ ಶಾಲೆ ಬಸ್ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ಹೊರಟಿತ್ತು. ಅದೇ ರೀತಿ ಮಾನ್ವಿಯಿಂದ ರಾಯಚೂರು ಕಡೆಗೆ ಸಾರಿಗೆ ಬಸ್ ಹೊರಟಿತ್ತು ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….