ತರೀಕೆರೆ, (ಸೆ.07): ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೈರಾಪುರ ಗೇಟ್ ಬಳಿ ನಡೆದಿದೆ.
ಮೃತ ದುರ್ದೈವಿಗಳನ್ನು 20 ವರ್ಷದ ಶ್ರೀಧರ್, ಧನುಷ್ ಎಂದು ಗುರುತಿಸಲಾಗಿದೆ.
ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಗಣಪತಿ ವಿಗ್ರಹ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.
ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….