ಕಾಮರೆಡ್ಡಿ, (ಸೆ.07); ಯುವಕನೊಬ್ಬ ರೀಲ್ಸ್ಗಾಗಿ ನಾಗರಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮೃತ ಯುವಕನನ್ನು ಶಿವ ಎಂದು ಗುರುತಿಸಲಾಗಿದೆ.
ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ನವಾಡ ಮಂಡಲದ ದೇಸಾಯಿಪೇಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹಾವಾಡಿಗನೊಬ್ಬನ ಮಗ ಶಿವ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಬಾಯಲ್ಲಿ ಕಚ್ಚಿ ಹಿಡಿದಿದ್ದಾನೆ.
ಆದರೆ ಬಾಯಿಯೊಳಗೆ ಹೋದ ಹಾವು ಶಿವನಿಗೆ ಕಚ್ಚಿದ್ದು ಇದು ಶಿವನ ಗಮನಕ್ಕೆ ಬಂದಿರುವುದಿಲ್ಲ. ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಶಿವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ
ಆದರೆ ಆತ ಆದಾಗಲೇ ಹಾವು ಕಡಿತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಶಿವ ಹಾವನ್ನು ಬಾಯಲ್ಲಿ ಹಿಡಿದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….