ದೊಡ್ಡಬಳ್ಳಾಪುರ, (ಸೆ.11); ಇತ್ತೀಚೆಗೆ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಸಂಭವಿಸಿದ ಸರ್ಕಾರಿ ಸಾರಿಗೆ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಪ್ರಕರಣ ಹಾಗೂ ನಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ನಗರ ಠಾಣೆ ಪೊಲೀಸರು ಮುಂದಾಗಿದ್ದಾರೆ.
ಈ ನಿಟ್ಟಿನಲ್ಲಿ ಡಿವೈಎಸ್ಪಿ ರವಿ ಅವರ ನೇತೃತ್ವದಲ್ಲಿ ನಗರದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಚಾಲಕರ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ಕೂಡ ಭಾಗವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನ ಚಾಲಕರು ಪಾಲಿಸಬೇಕಾದ ಸಾರಿಗೆ ನಿಯಮಗಳ ಪಾಲನೆ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ತಿಳಿಸಿದ್ದಾರೆಂದು ತಿಳಿದುಬಂದಿದ್ದಾರೆ.
ಅಲ್ಲದೆ ಪ್ರಸ್ತುತ ಜುಲೈ 1 ರಿಂದ ದೇಶಾದ್ಯಂತ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಅಪಘಾತ ಪ್ರಕರಣದಲ್ಲಿ ಚಾಲಕರಿಗೆ ವಿಧಿಸಬಹುದಾದ ಶಿಕ್ಷೆಯ ಕುರಿತು ವಿವರಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಪಿಎಸ್ಐ ಈರಮ್ಮ, ಖಾಸಗಿ ಬಸ್, ಆಟೋ, ಖಾಸಗಿ ಶಾಲೆಯ ಚಾಲಕರುಗಳು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….