ಬೆಂಗಳೂರು, (ಸೆ.11); ಶಾಲೆಗೆ ವಿದ್ಯಾರ್ಥಿಗಳು ಚಕ್ಕರ್ ಹಾಕುವುದು ಸಹಜ. ಆದರೆ ಕೆಲವು ಕಡೆ ಶಿಕ್ಷಕರು ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಪಾಠ ಮಾಡಬೇಕು. ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಹೇಗೆ? ಅಂತಹ ಶಿಕ್ಷಕರಿಂದ ವಿದ್ಯಾರ್ಥಿಗಳು ಏನನ್ನು ಕಲಿಯಲು ಸಾಧ್ಯ ಆದ್ದರಿಂದ ಆ ರೀತಿಯ ಶಿಕ್ಷಕರ ವಿರುದ್ಧ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಶಿಕ್ಷಕರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ಚಕ್ಕರ್ ಹಾಕುವ ಶಿಕ್ಷಕರಿಂದ ಮಕ್ಕಳಿಗೆ ಬಹಳ ತೊಂದರೆಯಾಗುತ್ತದೆ. ಶಾಲೆಗೆ ಸರಿಯಾಗಿ ಬಂದು ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….