ಚಿಕ್ಕಬಳ್ಳಾಪುರ, (ಸೆ.11); ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಬೇಡ ಎಂದು ಹೇಳಿದಕ್ಕೆ ಮನನೊಂದ ಯುವಕ ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದಲ್ಲಿ ನಡೆದಿದೆ.
21 ವರ್ಷದ ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ.
ಮಂಜುನಾಥ ಹಾಗೂ ಲಕ್ಷ್ಮಿನರಸಮ್ಮ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು ಗ್ರಾಮದಲ್ಲಿ ಗಣೇಶನ ಉತ್ಸವವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿದ್ದರು. ಆದರೆ ಕಳೆದ ರಾತ್ರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ಗಿರೀಶ್ ಡ್ಯಾನ್ಸ್ ಮಾಡಿದ್ದು ಇದನ್ನು ಗಮನಿಸಿದ ಅಣ್ಣ ಈ ರೀತಿಯಾಗಿ ಡ್ಯಾನ್ಸ್ ಮಾಡಬೇಡ ಎಂದು ಬುದ್ದಿವಾದ ಹೇಳಿದ್ದರಂತೆ.
ಇನ್ನೂ ಅಣ್ಣ ಬುದ್ದಿ ವಾದ ಹೇಳಿದಕ್ಕೆ ಕೋಪಗೊಂಡ ಯುವಕ ಗಿರೀಶ್ ಮನೆಗೆ ಹೋಗಿ ತಾಯಿಯ ಸೀರೆಯನ್ನು ತಗೆದುಕೊಂಡು ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆದರೆ ಇಂದು (ಸೆ.11) ಗ್ರಾಮದ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆಗೆ ಹೋಗಿದ್ದ ವೇಳೆ ಗಿರೀಶ್ ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsapp, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</