ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆಪ್ಟೆಂಬರ್ 11): ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ  ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ  ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ.

ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ: ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಸ್ ಐ ಹಗರಣ- ಎಸ್ ಐಟಿ ಕ್ರಮಕ್ಕೆ ಸೂಚನೆ: ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಕಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105758"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!