ಸಿರವಾರ, (ಸೆ.11): ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಖಾಸಗಿ ಶಾಲೆಯಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು 14 ವರ್ಷದ ತರುಣ್ ಅತ್ತನೂರು ಎಂದು ಗುರುತಿಸಲಾಗಿದೆ.
ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ಎಂಟನೇ ತರಗತಿ ವಿದ್ಯಾರ್ಥಿ ತರುಣ್ ಎಂದಿನಂತೆ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದಿದ್ದ. ಈತನನ್ನು ಕೂಡಲೇ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….