ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೆಂ.ಗ್ರಾ.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾರ ವೈರಲ್ ವಿಡಿಯೋ ನೋಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 15): ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಬಳಿ ಇಂದು  ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಬೀದರ್ ಇಂದ ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 77 ಕಿಲೋಮೀಟರ್ ಉದ್ದದ ಬೃಹತ್ ಮಾನವ ಸರಪಳಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಶ್ರಮಿಸಿದ್ದಾರೆ.  

ಸಂವಿಧಾನದ ಉಳಿವು ಹಾಗು ಪ್ರಜಾಪ್ರಭುತ್ವದ ರಕ್ಷಣೆ ಇದರ ಮೂಲ ಉದ್ದೇಶವಾಗಿದೆ. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು  ಜಾತ್ಯಾತೀತ ಭಾವನೆಯಿಂದ ಬದುಕಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರ ಕನಸು ಸಹ ಆಗಿತ್ತು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ಮಾತನಾಡಿ ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ.

ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳ್ಳಲು ಅಧಿಕಾರಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚು ಶ್ರಮವಹಿಸಿದ್ದಾರೆ.

ಜಿಲ್ಲೆಯಲ್ಲಿ ಏಕಕಾಲದಲ್ಲಿ ಎರಡು ಕಡೆ ಮಾನವ ಸರಪಳಿ ರಚನೆಯಾಗಿದ್ದು, ಮೊದಲ‌ ಭಾಗದಲ್ಲಿ ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ನಿಂದ ಪ್ರಾರಂಭವಾಗಿ ದಾಬಸ್‌ಪೇಟೆ ಮುಖಾಂತರ ‌ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ ವರೆಗೆ 54 ಕಿಲೋ ಮೀಟರ್ ಸರಪಳಿ ರಚನೆಯಾಗಿದೆ.

ಎರಡನೇ ಭಾಗದಲ್ಲಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರದಿಂದ ಪ್ರಾರಂಭಿಸಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ 23 ಕಿಲೋಮೀಟರ್ ಸೇರಿ ಒಟ್ಟು 77 ಕಿಲೋಮೀಟರ್ ವರೆಗೆ ಮಾನವ ಸರಪಳಿ ಯಶಸ್ವಿಯಾಗಿದೆ ಎಂದರು. 

    ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ‌ಸಮಾನತೆ ಸಿಗುವಂತಾಗಬೇಕು. ಯಾವುದೇ ಭೇದ ಭಾವ ಇಲ್ಲದೆ ನಾವೆಲ್ಲರು ಒಂದೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯದ ಹಿತಕ್ಕಾಗಿ ಒಟ್ಟಾಗಿ ದುಡಿಯಬೇಕು. ಆಡಂಬರದ ಆಚರಣೆ ಮಾಡದೆ ಸಂವಿಧಾನದ ಆಶಯದ‌ ಬಗ್ಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಬೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನಗಳ ಅಧ್ಯಕ್ಷ ಬಿ. ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ, ತಾಲ್ಲೂಕು ತಹಶೀಲ್ದಾರ್ ಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]