ಬೆಂಗಳೂರು, (ಸೆ.12); ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ತೀವ್ರವಾಗಿರುವ ಹಿನ್ನೆಲೆಯಲ್ಲಿ ಸಂಘ ಪರಿವಾರದ ಮುಖಂಡರು ಗುರುವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಸದಾಶಿವನಗರದ ರಾಷ್ಟೋತ್ಥಾನ ಕೇಂದ್ರ ದಲ್ಲಿ ಬೆಳಗ್ಗೆ 8.30ರಿಂದ ಸಭೆ ಆರಂಭವಾಗಿದ್ದು, ಮಧ್ಯಾಹ್ನದವರೆಗೂ ಮುಂದುವರೆಯುವ ಸಾಧ್ಯತೆಯಿದೆ. ಬಿಜೆಪಿಯ 40 ಮಂದಿ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ.
ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಉಸ್ತುವಾರಿ ಡಾ.ರಾಧಾ ಮೋಹನ್ ದಾಸ್ ಅಗರ್‌ವಾಲ್, ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಜತೆಗೆ ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿ ಹೊಳಿ, ಅರವಿಂದ್ ಲಿಂಬಾವಳಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ವಿಜಯೇಂದ್ರ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಪಕ್ಷದಲ್ಲಿ ಅಸಮಾಧಾನ ಕೇಳಿಬಂದಿತ್ತು. ಅದು ಹಂತ ಹಂತವಾಗಿ ತೀವ್ರಗೊಂಡು ಇತ್ತೀಚೆಗೆ ಬೆಳಗಾ ವಿಯಲ್ಲಿ ಪ್ರತ್ಯೇಕ ಸಭೆಯನ್ನೂ ನಡೆಸಿದ್ದರು.
ಈ ಸಭೆಯಲ್ಲಿ ಯತ್ನಾಳ, ರಮೇಶ್ ಜಾರಕಿಹೊಳಿ, ಲಿಂಬಾವಳಿ, ಸಿದ್ದೇಶ್ವರ್, ಅಣ್ಣಾಸಾಹೇಬ್ ಜೊಲ್ಲೆ, ಪ್ರತಾಪ್ ಸಿಂಹ, ಮೊದಲಾದವರು ಪಾಲ್ಗೊಂಡಿದ್ದರು. ಈ ಹಿನ್ನೆಲೆ ಎಚ್ಚೆತ್ತ ಹೈಕಮಾಂಡ್‌ಗೆ ಬಿಕ್ಕಟ್ಟು ತೀವ್ರಗೊಳ್ಳಬಾರದು ಎಂಬ ಉದ್ದೇಶದಿಂದ ಸಂಘದ ಮಧ್ಯಸ್ಥಿಕೆಗೆ ಮನವಿ ಮಾಡಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–