ದೊಡ್ಡಬಳ್ಳಾಪುರ, (ಸೆ.15); ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ ಸುಮಾರು 600 ವಿದ್ಯಾರ್ಥಿಗಳು ಇಂದು ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಂಡಿ ಬ್ಯಾಡರಹಳ್ಳಿ ಗೇಟ್ ನಿಂದ ಕೆಸ್ತೂರು ಗೇಟ್ ನವರೆಗೆ ವಿಸ್ತಾರಗೊಂಡಿದ್ದ ವಿದ್ಯಾರ್ಥಿಗಳ ಸರಪಳಿಯಲ್ಲಿ ಸಂವಿಧಾನ ಪೀಠಿಕೆಯ ಹಲವು ದೊಡ್ಡ ದೊಡ್ಡ ಬ್ಯಾನರ್ ಗಳು, ರಾಷ್ಟ್ರ ನಾಯಕರ ಫೋಟೋಗಳು, ಪ್ರಜಾಪ್ರಭುತ್ವದ ವಿಶಿಷ್ಟತೆಯನ್ನು ಸಾರುವ ಫಲಕಗಳನ್ನು ಪ್ರದರ್ಶಿಸಿ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿದ್ಯಾರ್ಥಿ ಹಾಗೂ ಶಿಕ್ಷಕರೆಲ್ಲರೂ ಅತ್ಯುತ್ಸಾಹದಿಂದ ಭಾಗವಹಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವುಂಟು ಮಾಡಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮತ್ತು ಆರ್‌ಟಿಓ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜಾಗೃತ ಸಭೆಗಳನ್ನು ನಡೆಸಿಕೊಟ್ಟರು.
ಒಟ್ಟಾರೆಯಾಗಿ ಇಂದಿನ ಕಾರ್ಯಕ್ರಮ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–
–>