![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಮಡಿಕೇರಿ, (ಸೆ.18): ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಮಂಗಳವಾರ (ಸೆ.17) ಮಡಿಕೇರಿಯಲ್ಲಿ ಜನಿಸಿದ ಗಂಡು ಮಗುವಿಗೆ ಪೋಷಕರು ನರೇಂದ್ರ ಮೋದಿ ಎಂದು ಹೆಸರಿಟ್ಟು ನಾಮಕರಣ ಮಾಡಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂದರ ನಗರದ ಮಹೇಂದ್ರ-ಜಯಲಕ್ಷ್ಮೀ ದಂಪತಿಗೆ ಮಂಗಳವಾರ ಗಂಡು ಮಗು ಜನಿಸಿದೆ. ಮೋದಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ದಂಪತಿ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರು ಇಟ್ಟಿದ್ದಾರೆ.
ಈ ವೇಳೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಶುಭ ಕೋರಿ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ ತೊಡಿಸಿ ಆಸ್ಪತ್ರೆ ಆವರಣದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….