ಬುಲ್ದಾನ, (ಸೆ.16): ಮೀಸಲಾತಿ ವಿಚಾರವಾಗಿ ಅಮೆರಿಕದಲ್ಲಿ ರಾಹುಲ್ ಗಾಂಧಿ ಹೇಳಿಕೆ ಹಿನ್ನೆಲೆಯಲ್ಲಿ ಶಿವಸೇನೆ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ವಾಡ್ ಸೋಮವಾರ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಇಂದು ಬುಲ್ಲಾನದಲ್ಲಿರುವ ತಮ್ಮ ಕಚೇರಿಯಲ್ಲಿ ಎಎನ್ಐ ಸುದ್ದಿವಾಹಿನಿಯೊಂದಿಗೆ ಮಾತನಾಡುವ ವೇಳೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.
ಇದೀಗ ಶಾಸಕ ಸಂಜಯ್ ಗಾಯಕ್ವಾಡ್ ಅವರ ಆಕ್ಷೇಪಾರ್ಹ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.
ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಡವರ ಬದುಕುವ ಹಕ್ಕಿಗಾಗಿ ಎಸ್ಸಿ, ಎಸ್ಟಿ, ಒಬಿಸಿ ಮುಂತಾದವರಿಗೆ ಮೀಸಲಾತಿ ನೀಡಿದರು. ಮೀಸಲಾತಿ ಕೊನೆಗೊಳ್ಳುತ್ತದೆ ಎಂಬ ಕಲ್ಪನೆಯೊಂದಿಗೆ ಕಾಂಗ್ರೆಸ್ ನಾಯಕರು ಎಲ್ಲಾ ಹಿಂದುಳಿದ ವರ್ಗದ ಸಮುದಾಯಗಳು ಮತ್ತು ಒಬಿಸಿ ಸಮುದಾಯವನ್ನು ದಾರಿ ತಪ್ಪಿಸಿದ್ದಾರೆ.
ಈಗ ರಾಹುಲ್ ಗಾಂಧಿಯವರು ದೇಶದಲ್ಲಿ ಮೀಸಲಾತಿಯನ್ನು ಕೊನೆಗಾಣಿಸಬೇಕಾಗಿದೆ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆಯಲ್ಲಿ ರಾಹುಲ್ ಗಾಂಧಿಯ ನಿಜ ಮುಖ ಇಂದು ಜನರ ಮುಂದೆ ಬಂದಿದೆ ಎಂದರು.
ಸದ್ಯ ಸಂಜಯ್ ಗಾಯಕ್‌ವಾಡ್ ಈ ಹೇಳಿಕೆಯಿಂದ ಮಹಾರಾಷ್ಟ್ರ ಸರ್ಕಾರದಲ್ಲಿರುವ ಶಿವಸೇನೆಯ ಮಿತ್ರಪಕ್ಷ ಬಿಜೆಪಿ ಅಂತರ ಕಾಯ್ದುಕೊಂಡಿದೆ.
ಅಮೇರಿಕಾ ಪ್ರವಾಸದ ವೇಳೆ ಮಾತನಾಡಿದ್ದ ರಾಹುಲ್ ಗಾಂಧಿ, ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ರದ್ದತಿ ಕುರಿತು ಕಾಂಗ್ರೆಸ್ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದಾಗಿ ವರದಿಯಾಗಿತ್ತು.
ಇದನ್ನು ಬಿಜೆಪಿ ಪರ ಮಾಧ್ಯಮಳು ವಿವಾದವಾಗಿಸಿದ ನಂತರ ನಡುವೆ ದ ಮಾಧ್ಯಮ ಸಂವಾದದಲ್ಲಿ, ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ ಎಂದು ಹೇಳಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….