ದೊಡ್ಡಬಳ್ಳಾಪುರ, (ಸೆ.19); ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಜೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ಕೆಂಪು ಬಣ್ಣದ ಶಿಫ್ಟ್ ಕಾರ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಮಹಿಳೆಯೋರ್ವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಗುಂಜೂರು ಗ್ರಾಮದ ಶೈಲಜ ಎನ್ನುವವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಶಿಪ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಆರೋಪಿಗಳು ಕೆಂಪು ಬಣ್ಣದ ಜರ್ಕಿನ್ ಕಪ್ಪುಬಣ್ಣದ ಪ್ಯಾಂಟುಗಳನ್ನು ಧರಿಸಿರುತ್ತಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಡಿವೈಎಸ್ಪಿ ರವಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.