FIR; ಗೃಹ ಸಚಿವ ಪರಮೇಶ್ವರ ವಿರುದ್ಧ ಆರ್.ಅಶೋಕ ವಾಗ್ದಾಳಿ

ಬೆಂಗಳೂರು, (ಸೆ.19); ಕೈಲಾಗದವನು ಮೈಪರಚಿಕೊಂಡ ಎಂಬಂತೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಗೆ ಕಾರಣರಾದ ಮತಾಂಧರನ್ನು ಪತ್ತೆ ಹಚ್ಚಿ ಅವರ ಹೆಡೆಮುರಿ ಕಟ್ಟಬೇಕಾದ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಪಕ್ಷ ನಾಯಕರ ಮೇಲೆ FIR ಹಾಕಿರುವುದು ಹೇಡಿತನದ ಪರಮಾವಧಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಅಸಮರ್ಥ ಗೃಹ ಸಚಿವ ಪರಮೇಶ್ವರ ಅವರೇ, ಕಳೆದ ಬುಧವಾರ ರಾತ್ರಿ ಬೆಂಗಳೂರಿನಿಂದ ಕೇವಲ 130 ಕಿಮೀ ದೂರದಲ್ಲಿರುವ ನಾಗಮಂಗಲದಲ್ಲಿ ರಾಜ್ಯವೇ ಬೆಚ್ಚಿಬೀಳುವಂತಹ ಘಟನೆ ನಡೆದು ಒಂದು ವಾರ ಕಳೆದಿದ್ದರೂ ಈವರೆಗೂ ತಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಕೆಲಸ ಮಾಡಿಲ್ಲ. ಘಟನಾ ಸ್ಥಳಕ್ಕೆ ಹೋಗಿ ಅಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡು, ಭಯಭೀತರಾಗಿರುವ ಸ್ಥಳೀಯರ ಅಳಲು, ದುಮ್ಮಾನ, ಆತಂಕ, ಆಕ್ರೋಶ ಕೇಳಿದ್ದಿದ್ದರೆ ತಮಗೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗುತ್ತಿತ್ತು. ಆದರೆ ತಮಗೆ ಕರ್ತವ್ಯ ಪ್ರಜ್ಞೆಯೇ ಇಲ್ಲ.

ನನ್ನ ಮೇಲೆ ಎಫ್ಐಆರ್ ಹಾಕಿ ಏನು ಸಾಧಿಸಲು ಹೊರಟಿದ್ದೀರಿ? ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು, ಪತ್ರಕರ್ತರು ವ್ಯಕ್ತಪಡಿಸಿರುವ ಅನುಮಾನವನ್ನ ನನ್ನ X ಖಾತೆ ಪೋಸ್ಟ್ ಮೂಲಕ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇನೆಯೇ ಹೊರತು, ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ.

ಇಷ್ಟಕ್ಕೂ ಎಫ್ಐಆರ್ ಹಾಕಿರುವ ಪೊಲೀಸರು ನನ್ನ ಪೋಸ್ಟ್ ನಲ್ಲಿರುವ ಮಾಹಿತಿಯನ್ನ ಪೂರ್ತಿಯಾಗಿ ಓದಿದ್ದಾರೋ ಇಲ್ಲವೋ ಅಥವಾ ಅವರಿಗೆ ಕನ್ನಡ ಸರಿಯಾಗಿ ಬರುತ್ತೋ ಇಲ್ಲವೋ ಅರ್ಥವಾಗುತ್ತಿಲ್ಲ.

ನಾನು ಹಂಚಿಕೊಂಡಿರುವ ದೃಶ್ಯಾವಳಿಗಳು ಚಿಕ್ಕಮಗಳೂರಿನಲ್ಲಿ ಮತಾಂಧರು ಪ್ಯಾಲೆಸ್ಟೈನ್ ಧ್ವಜ ಹಿಡಿದು ಮಾಡಿದ ಪುಂಡಾಟಿಕೆ, ದಾವಣಗೆರೆಯಲ್ಲಿ ಕೇಸರಿ ಧ್ವಜ ಹಾರಿಸಿದ ಹಿಂದೂಗಳ ಮೇಲೆ ಮತಾಂಧರು ಹಲ್ಲೆ ಮಾಡಿರುವ ಘಟನೆಗಳದ್ದು. ನನ್ನ ಪೋಸ್ಟ್ ನಲ್ಲಿ ನಾನು ಉಲ್ಲೇಖ ಮಾಡಿರುವುದೂ ಅದನ್ನೇ.

ರಾಜ್ಯದ ಅನೇಕ ಕಡೆಗಳಲ್ಲಿ ಗಣೇಶೋತ್ಸವವನ್ನೇ ಗುರಿಯಾಗಿಟ್ಟುಕೊಂಡು ನಡೆದಿರುವ ಇಂತಹ ಪ್ರಚೋದನಕಾರಿ ಘಟನೆಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ಕೈವಾಡ ಇರಬಹುದು ಎಂದು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ನಾನು ಯಾವುದೇ ಸುಳ್ಳು ಮಾಹಿತಿ ಹಂಚಿಕೊಂಡಿಲ್ಲ.

ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿರುವ ದೃಶ್ಯಗಳು, ಕಲ್ಲು ಎಸೆದಿರುವ ದೃಶ್ಯಗಳು, ವಾಹನ, ಅಂಗಡಿಗಳನ್ನ ಧ್ವಂಸ ಮಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ ಇದೊಂದು ‘ಸಣ್ಣ’ ಘಟನೆ, ‘ಆಕಸ್ಮಿಕ’ ಘಟನೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಅಸಲಿಗೆ ಗೃಹ ಸಚಿವ ಪರಮೇಶ್ವರ್ ಅವರ ಮೇಲೆ ಮೊದಲು FIR ದಾಖಲಿಸಬೇಕು. ಸಚಿವರಿಗೆ ತಪ್ಪು ಮಾಹಿತಿ ನೀಡಿದ ಪೊಲೀಸರ ಮೇಲೆ ಎಫ್ಐಆರ್ ಹಾಕಬೇಕು.

ಕೋಮುಗಲಭೆಗಳನ್ನ ತಡೆಯಲಾಗದ ನಾಲಾಯಕ್ ಸರ್ಕಾರ, ಮತಾಂಧರ ಹೆಡೆಮುರಿ ಕಟ್ಟಲಾಗದ ನಿಸ್ತೇಜ ಸರ್ಕಾರ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಹೇಡಿತನದ ಲಕ್ಷಣ.

ನಮ್ಮ ದೇಶ, ಧರ್ಮದ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ರಕ್ಷಣೆ ವಿಚಾರದಲ್ಲಿ, ಹಿಂದೂಗಳ ಹಬ್ಬ, ಉತ್ಸವಗಳ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ, ರಾಮಜನ್ಮಭೂಮಿ ಹೋರಾಟದ ಸಂದರ್ಭದಲ್ಲಿ ದೇಶಕ್ಕಾಗಿ ಧರ್ಮಕ್ಕಾಗಿ ಜೈಲು ವಾಸ ಅನುಭವಿಸಿದವನು ನಾನು. ಇಂತಹ ಒಂದಲ್ಲ ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಸವಾಲು ಎಸೆದಿದ್ದಾರೆ.

ರಾಜಕೀಯ

ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸುವ ಷಡ್ಯಂತ್ರ; ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆರಳಿದ ಬಿ.ಮುನೇಗೌಡ

ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸುವ ಷಡ್ಯಂತ್ರ; ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆರಳಿದ ಬಿ.ಮುನೇಗೌಡ

ಬೆಂಗಳೂರು ಗ್ರಾಮಾಂತರ; ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಚುನಾವಣೆ (channapatna by election) ರಾಜ್ಯಾದ್ಯಂತ ವಿಶೇಷ ಗಮನ ಸೆಳೆಯುತ್ತಿದೆ. ಹಾಲಿ ಕೇಂದ್ರ ಮಂತ್ರಿ, ಮಾಜಿ ಸಿಎಂ, ಜೆಡಿಎಸ್

[ccc_my_favorite_select_button post_id="94727"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!