Site icon Harithalekhani

ಹಾಸನಾಂಬ ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆ

ಹಾಸನ: ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ಪ್ರಸಾದಕ್ಕೂ ನಂದಿನಿ ತುಪ್ಪ ( Nandini ghee ) ಬಳಕೆಗೆ ನಿರ್ಧರಿಸಲಾಗಿದೆ.

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲು ತಿಂಗಳು ಮಾತ್ರ ಬಾಕಿ ಇದೆ.

ಹಾಸನಾಂಬ ಮಹೋತ್ಸವದಲ್ಲಿ ಭಕ್ತರಿಗೆ ನೀಡುವ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪ ದಿಂದಲೇ ತಯಾರಿಸಲು ನಿರ್ಧರಿಸಲಾಗಿದೆ. ಇದರ ಜವಾಬ್ದಾರಿಯನ್ನು ಬೆಂಗಳೂರಿನ ಇಸ್ಕಾನ್ ಸಂಸ್ಥೆಗೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ನಂದಿನಿ ತುಪ್ಪ, ಹಾಲು ಹಾಗೂ ಹಾಲಿನ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಾಗಿದೆ.

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಲ್ಲೂ ಬೇಡಿಕೆ ಹೆಚ್ಚಿದೆ.

ತಿರುಪತಿ ಲಡ್ಡು ವಿವಾದದ ನಂತರದಲ್ಲಿ ಹಾಲಿನ ಉತ್ಪನ್ನದ ಬೇಡಿಕೆ ಹೆಚ್ಚಳವಾಗಿದೆ. ಈಗಾಗಲೇ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲೂ ನಂದಿನಿ ತುಪ್ಪ ಬಳಕೆಗೆ ಸರಕಾರ ಆದೇಶಿಸಿದೆ.

Exit mobile version