Site icon ಹರಿತಲೇಖನಿ

ಬೆಳ್ಳಂಬೆಳಗ್ಗೆ ಬಾಶೆಟ್ಟಿಹಳ್ಳಿ ಬಳಿ ಅಪಘಾತ.. ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಕೋಳಿ ಸಾಗಿಸುವ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬಾಶೆಟ್ಟಿಹಳ್ಳಿ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಪೆಟ್ರೋಲ್ ಬಂಕ್ ಬಳಿ ವಾಹನ ತಿರುವು ಪಡೆಯುವಾಗ ಘಟನೆ ಸಂಭವಿಸಿದ್ಣು, ಈ ವೇಳೆ ತೀವ್ರವಾಗಿ ಗಾಯಗೊಂಡ ಎಳ್ಳುಪುರದಲ್ಲಿ ವಾಸವಿದ್ದ ಬೈಕ್ ಸವಾರ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಮೃತನ ಗುರುತು ಪತ್ತೆಯಾಗಿಲ್ಲವಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

Exit mobile version