ನಾನು ದಾಖಲೆ ಇಟ್ಟರೆ ಆರೇಳು ಸಚಿವರ ತಲೆದಂಡ ಆಗುತ್ತದೆ: ಕೇಂದ್ರ ಸಚಿವ HD ಕುಮಾರಸ್ವಾಮಿ

ಬೆಂಗಳೂರು: ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಸಚಿವರು ಗಂಭೀರ ಆರೋಪ ಮಾಡಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಐಜಿಪಿ ಚಂದ್ರಶೇಖರ್ ವಿರುದ್ಧ ಸರಣಿ ದಾಖಲೆಗಳ ಸಮೇತ ಆರೋಪಗಳನ್ನು ಮಾಡಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನ್ನ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿ ಗೌಪ್ಯ ಪಾತ್ರವೊಂದು ಸೋರಿಕೆ ಆಗಿತ್ತು. ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಗೆ ಆ ಪತ್ರ ಸೋರಿಕೆ ಆಗಿತ್ತು. ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆ ಆಗಿದೆ. ಆದರೆ, ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಥೆ ಕಟ್ಟಿ ರಾಜ್ಯಪಾಲರ ಕಾರ್ಯಾಲಯದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಅನುಮತಿ ಕೊಡುವಂತೆ ಲೋಕಾಯುಕ್ತ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನ ಮತ್ತು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರ ಕಾರ್ಯಾಲಯದ ಬಗ್ಗೆ ತನಿಖೆಗೆ ಅನುಮತಿ ಕೋರುವ ದರ್ಪವನ್ನು ಈ ಅಧಿಕಾರಿ ತೋರಿಸಿದ್ದಾರೆ. ಈ ಅಧಿಕಾರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲೇ ಸರಣಿ ಅಪರಾಧಗಳನ್ನು ಮಾಡಿ ಸಿಕ್ಕಿ ಹಾಕಿಕೊಂಡಿರುವ ಐಜಿಪಿ ಚಂದ್ರಶೇಖರ್ ಅವರಿಗೆ ರಾಜ್ಯ ಸರ್ಕಾರ ಆಮಿಷಗಳನ್ನು ಒಡ್ಡಿ ಇಂತಹ ಕಾನೂನು ಬಾಹಿರ ಕೃತ್ಯ ಮಾಡಿಸುತ್ತಿದೆ. ಅವರಿಗೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಹುದ್ದೆಯ ಆಮಿಷ ಒಡ್ಡಲಾಗಿದೆ.

ಈ ಸರ್ಕಾರ ಒಬ್ಬರಿಗೆ ಈ ರೀತಿಯ ಆಮಿಷ ಒಡ್ಡಿಲ್ಲ.. ಬಿ.ಕೆ.ಸಿಂಗ್, ಎಂ.ಚಂದ್ರಶೇಖರ್, ಗುಪ್ತದಳ ಮುಖ್ಯಸ್ಥರು ಸೇರಿದಂತೆ ಅನೇಕರಿಗೆ ಕಮಿಷನರ್ ಮಾಡುತ್ತೇವೆ ಎಂದು ಟೋಪಿ ಹಾಕಿದ್ದಾರೆ. ಇಂಥ ಸರ್ಕಾರದಲ್ಲಿ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತವೆ ಎನ್ನುವ ನಂಬಿಕೆ ಇಲ್ಲ ಎಂದು ಕೇಂದ್ರ ಸಚಿವರು ದೂರಿದರು.

ಪತ್ರ ಸೋರಿಕೆ ಬಗ್ಗೆ ರಾಜ್ಯಪಾಲರ ಸಿಬ್ಬಂದಿ ವಿಚಾರಣೆಗೆ ಚಂದ್ರಶೇಖರ್ ಪತ್ರ ಬರೆದು ಉದ್ದಟತನ ತೋರಿಸಿದ್ದಾರೆ. ರಾಜ್ಯಪಾಲರ ಕಚೇರಿ ಪರಿಶೀಲನೆ ಮಾಡುತ್ತೇನೆ ಎಂದು ಚಂದ್ರಶೇಖರ್ ಕೇಳುತ್ತಾರೆ ಎಂದರೆ ಆತನಿಗೆ ಎಷ್ಟು ಉದ್ದಟತನ ಇರಬೇಕು? ರಾಜ್ಯಪಾಲರ ಕಚೇರಿ ಸರ್ಚ್ ಮಾಡುವ ಸೂಪರ್ ಕಾಪ್ ಯಾರಿರಬೇಕು ಎಂದು ಕೆದಕಿದರೆ ಇವರ ಹಿನ್ನಲೆ ಗೊತ್ತಾಯಿತು ನನಗೆ ಎಂದು ಚಂದ್ರಶೇಖರ್ ಹಿನ್ನೆಲೆಯನ್ನು ಬಿಡಿಸಿಟ್ಟರು ಕುಮಾರಸ್ವಾಮಿ ಅವರು.

ಈ ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶದ ಕೇಡರ್ ನ ಐಪಿಎಸ್ ಅಧಿಕಾರಿ. 1998ರಲ್ಲಿ ಹಿಮಾಚಲ ಪ್ರದೇಶದ ಕೇಡರ್ ಆಗಿ ಆಯ್ಕೆಯಾಗಿದ್ದವರು. ಐದು ವರ್ಷಗಳ ಅವಧಿಗೆ ನಿಯೋಜನೆ ಮೇಲೆ ಕರ್ನಾಟಕಕ್ಕೆ ಬಂದರು ಇವರು. ಈ ಅಧಿಕಾರಿ ಹಿಮಾಚಲ ಪ್ರದೇಶದಲ್ಲಿ ಹವಾಮಾನ ಸರಿಯಾಗಿಲ್ಲ ಎಂದು ಸುಳ್ಳು ದಾಖಲೆ ಸೃಷ್ಟಿ ಮಾಡಿ ಕರ್ನಾಟಕದಲ್ಲೇ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ನಿಯೋಜನೆ ಮೇಲೆ ಬಂದ ಈ ವ್ಯಕ್ತಿ ಆಮೇಲೆ ಕರ್ನಾಟಕ ಕೇಡರ್ ಅಧಿಕಾರಿ ಆಗುತ್ತಾರೆ. ಅದಕ್ಕೆ ಏನೆಲ್ಲಾ ಅಕ್ರಮ ಎಸಗಿದರು? ಯಾರು ಯಾರ ನೆರವು ಪಡೆದುಕೊಂಡರು ಎನ್ನುವುದನ್ನು ನಾನು ಇಲ್ಲಿ ಹೇಳುವಂತಿಲ್ಲ. ಅದು ಬಹಳ ಸೂಕ್ಷ್ಮ ವಿಚಾರ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಐಜಿಪಿ ಚಂದ್ರಶೇಖರ್ ವಿರುದ್ಧ ಹಲವಾರು ದೂರುಗಳು ದಾಖಲಾಗಿ, ಆರೋಪ ಪಟ್ಟಿಗಳು ಸಲ್ಲಿಕೆಯಾಗಿವೆ. ಈ ವ್ಯಕ್ತಿ ಸರಣಿ ಅಪರಾಧಗಳನ್ನು ಮಾಡಿರುವ ಅಧಿಕಾರಿ. ತಮ್ಮ ಅಧೀನದಲ್ಲಿದ್ದ ಅಧಿಕಾರಿಯಿಂದ ಭೂಮಿ ವ್ಯವಹಾರಕ್ಕೆ ಸಂಬಂಧಿಸಿ ₹20 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಿದ್ದು, ಆ ದಾಖಲೆಯನ್ನು ಕೂಡ ಕೇಂದ್ರ ಸಚಿವರು ಓದಿ ಹೇಳಿದರು.

ಇದೇ ಅಧಿಕಾರಿ ಚಂದ್ರಶೇಖರ್ ತನ್ನ ಪತ್ನಿ ಹೆಸರಿನಲ್ಲಿ 38 ಮಹಡಿಯ ವಾಣಿಜ್ಯ ಕಟ್ಟಡ ಕಟ್ಟುತ್ತಿದ್ದಾರೆ. ಅದು ರಾಜಕಾಲುವೆ ಮೇಲೆ ಮಹಡಿ ಕಟ್ಟುತ್ತಿದ್ದಾರೆ. ಅಲ್ಲದೆ, ಕೆರೆಯನ್ನು ಕೂಡ ಒತ್ತುವರಿ ಮಾಡಿಕೊಳ್ಳಾಗಿದೆ. ಇದರ ಬಗ್ಗೆ ತನಿಖೆ ನಡೆಯಬೇಕು. ಇಂಥ ಅಧಿಕಾರಿಗಳನ್ನು ಇಟ್ಟುಕೊಂಡರೆ ರಾಜ್ಯ ಹೇಗೆ ಉದ್ದಾರ ಆಗುತ್ತದೆ.

ಕಾನೂನುಬಾಹಿರವಾಗಿ ತನ್ನ ಅಧೀನದ ಅಧಿಕಾರಿಗಳನ್ನು, ಬಿಲ್ಡರುಗಳನ್ನು ಹೆದರಿಸಿ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಎಷ್ಟು ಕೋಟಿ ವಸೂಲಿ ಮಾಡಿದ್ದಾರೆ? ಎನ್ನುವುದು ಹೊರಗೆ ಬರಬೇಕು. ಇವರು ಒಂದು ಖಾಸಗಿ ತಂಡ ಇದೆ ಇಟ್ಟುಕೊಂಡು ಈ ದಂಧೆ ನಡೆಸುತ್ತಿದ್ದಾರೆ. ಈತನ ಬಗ್ಗೆ ದಾಖಲೆ ಸಮೇತ ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನ್ನ ಬಳಿ ಈತನ ವ್ಯವಹಾರಗಳ ಬಗ್ಗೆ ದಾಖಲೆಗಳು ಇವೆ. ವಿಜಯ್ ತಾತಾ ಎಂಬ ವ್ಯಕ್ತಿ ಇದ್ದ. ರಾಜ್ಯದಲ್ಲಿ ಆತ ಒಂದು ಮಾಧ್ಯಮ ಸಂಸ್ಥೆ ನಡೆಸುತ್ತಿದ್ದ. ಈತನದು ಕೂಡ ಸುಲಿಗೆ ದಂಧೆಯೇ. ಈತನ ವಿರುದ್ಧ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಆರೋಪ ಪಟ್ಟಿಗಳು ದಾಖಲಾಗಿವೆ. ಇಂಥವನ ಜತೆ ಸೇರಿಕೊಂಡು ಐಜಿಪಿ ಚಂದ್ರಶೇಖರ್ ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ನಾನು ದಾಖಲೆ ಇಟ್ಟರೆ ಆರೇಳು ಸಚಿವರ ತಲೆದಂಡ ಆಗುತ್ತದೆ; ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣ: ನಾನು ಬಹಳ ಕ್ಲೀನ್, ಪಾರದರ್ಶಕ, ನನ್ನ ಜೀವನ ತೆರೆದ ಪುಸ್ತಕ ಎಂದೆಲ್ಲಾ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ ಪ್ರಕರಣಗಳ ಕಥೆ ಏನಾಗಿದೆ? ಅವುಗಳ ತನಿಖೆ ಎಲ್ಲಿಗೆ ಬಂದಿದೆ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ಇವರು ಕ್ಲೀನ್, ಸ್ವಚ್ಚ ಆಗಿದ್ದರೆ ಇಷ್ಟು ಪ್ರಕರಣಗಳು ಇವರ ಮೇಲೆ ಏಕೆ ದಾಖಲಾಗುತ್ತಿದ್ದವು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು; ಇಂಥ ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಹಿಂದೆ ಲೋಕಾಯುಕ್ತವನ್ನು ಮುಗಿಸಿ ಎಸಿಬಿಯನ್ನು ರಚನೆ ಮಾಡಿಕೊಂಡಿದ್ದರು ಎಂದು ಅವರು ಹೇಳಿದರು.

ಮಾಧ್ಯಮಗೋಷ್ಟಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಂಜುನಾಥ್, ಪಕ್ಷದ ಹಿರಿಯ ನಾಯಕರಾದ ಜಪ್ರುಲ್ಲಾ ಖಾನ್, ಸುಧಾಕರ ಶೆಟ್ಟಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!