Site icon Harithalekhani

ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಬೆಂಗಳೂರು: ಜಾತಿ ನಿಂದನೆ, ಅತ್ಯಾಚಾರ, ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು.

ನಗರದ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರ ಚೆಲುವರಾಜು ಅವರಿಗೆ ಕೀಳು ಭಾಷೆಯಲ್ಲಿ ನಿಂದಿಸುತ್ತಿರುವ ಆಡಿಯೋ ತುಣುಕೊಂದು ಕೆಲದಿನಗಳ ಹಿಂದೆ ಬಹಿರಂಗಗೊಂಡಿತ್ತು. ಬಳಿಕ ಮುನಿರತ್ನ ವಿರುದ್ಧ ಎರಡು ಎಫ್ ಐಆರ್‌ಗಳು ದಾಖಲಾಗಿತ್ತು.

ಹೊರರಾಜ್ಯಕ್ಕೆ ಪರಾರಿಯಾಗುವ ಪ್ರಯತ್ನದಲ್ಲಿದ್ದ ಮುನಿರತ್ನರನ್ನು ಪೊಲೀಸರು ಎಳೆದುಕೊಂಡು ಬಂದಿದ್ದರು. ಬಳಿಕ ಮಹಿಳೆಯೊಬ್ಬಳು ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು.

Exit mobile version