ತುಮಕೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮ ಹಗರಣಗಳಲ್ಲಿ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಈ ಎರಡೂ ಪ್ರಕರಣಗಳು ಸಿಬಿಐ ತನಿಖೆಗೊಳಗಾಗುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ತುಮಕೂರಿನ ಸಮಾಧಾನ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವುದು ಅನಿವಾರ್ಯವಾಗಲಿದೆ. ಎಂದರು.
ಮೈಸೂರು ಪಾದಯಾತ್ರೆಯ ಬಗ್ಗೆ ಮಾತನಾಡಿದ ಅವರು, ಪಾದಯಾತ್ರೆ ಯಶಸ್ವಿಯಾಗಿದ್ದು ಎರಡನೇ ಪಾದಯಾತ್ರೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ ಎಂದರು.
ಬಸನಗೌಡ ಪಾಟೀಲ್ ನೇತೃತ್ವದಲ್ಲಿ ದಾವಣಗೆರೆಯಲ್ಲಿ ನಡೆದ ಅತೃಪ್ತರ ಸಭೆಯನ್ನು ಕುರಿತು ಪ್ರತಿಕ್ರಿಯಿಸಿದ ಅವರು, ಬಿಎಸ್ ಯಡಿಯೂರಪ್ಪನವರಿಗೆ ಸವಾಲುಗಳು ಹೊಸದಲ್ಲ ಈ ಎಲ್ಲಾ ಸವಾಲುಗಳನ್ನೂ ಎದುರಿಸುತ್ತೇನೆ. ಸವಾಲಿಗೆ ಹೆದರುವುದಿಲ್ಲ.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಿಶ್ಚಿತ ಎಂದು ನುಡಿದರು. ಇದೇ ವೇಳೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರಕರಣ ದಾಖಲಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ತರಾತುರಿಯಲ್ಲಿ ಈ ನಿರ್ಣಯ ಕೈಗೊಂಡಿದೆ ಎಂದರು.