ಮೈಸೂರು; ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬರುವಂತೆ ಜಿಲ್ಲಾಡಳಿತದಿಂದ ಭಾನುವಾರ ಸಂಜೆ ಅಧಿಕೃತವಾದ ಆಹ್ವಾನವನ್ನು ಮೈಸೂರಿನ ರಾಜವಂಶಸ್ಥರಿಗೆ ನೀಡಲಾಯಿತು.
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅರಮನೆಯ ನಿವಾಸದಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲದೊಂದಿಗೆ ಆಹ್ವಾನ ಪತ್ರಿಕೆಯನ್ನು ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.
ಇದನ್ನೂ ಓದಿ: Doddaballapura; ರಸ್ತೆ ದಾಟಿದ ಹಾವು.. ವಾಹನ ಸವಾರರು ಶಾಕ್..!| ವಿಡಿಯೋ ನೋಡಿ
ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಅರಮನೆ ಮಂಡಳಿ ಉಪದೇಶಕ ಸುಬ್ರಹ್ಮಣ್ಯ, ಅರಮನೆ ಎಸ್‌ಸಿಪಿ ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.