ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah) ತಿಳಿಸಿದರು.
ಅವರು ಇಂದು ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ (basavaraj rayareddy) ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಒಳಮೀಸಲಾತಿ ಜಾರಿ ಬಗ್ಗೆ ಪರಿಶೀಲನೆ;
ಒಳಮೀಸಲಾತಿ ಜಾರಿ ತರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ , ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಬಿಜೆಪಿ ಜೆಡಿಎಸ್ ಪಕ್ಷ ದುರ್ಬಲವಾಗುವ ಭಯ ಕಾಡುತ್ತಿದೆ:
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಜಿ.ಟಿ.ದೇವೇಗೌಡರು ಅವರು ಜೆಡೆಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು, ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ ಎಂದು (Siddaramaiah)ಹೇಳಿದ್ದಾರೆ.
ಊಹಾಪೋಹಗಳು ಬೇಡ:
ಸಚಿವ ಸತೀಶ್ ಜಾರಕಿಹೊಳಿಯವರು ಪಕ್ಷದ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದರು.
ಇದನ್ನೂ ಓದಿ: ತಾಕತ್ತಿದ್ದರೆ ಎಫ್‌ಐಆರ್ ಆದವರೆಲ್ಲ ರಾಜೀನಾಮೆ ಕೊಡಿ: JDS ಹಿರಿಯ ಶಾಸಕನ ಹೇಳಿಕೆಗೆ ಕಮಲ-ದಳ ತಬ್ಬಿಬ್ಬು.. ಸಿಎಂ ಪ್ರಶಂಸೆ
ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ Siddaramaiah
ಮೈಸೂರು: ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು,ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಅವರು ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರಧಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.
ಇಂದು ಹಂ.ಪಾ .ನಾಗರಾಜಯ್ಯ ನವರಿಂದ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ದಸರಾ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ ಎಂದರು.
ಮೈಸೂರು ಸಾಂಸ್ಕೃತಿಕ ನಗರ
ಮೈಸೂರನ್ನು ಸಾಂಸ್ಕೃತಿಕ ನಗರ ಎಂದು ಗುರುತಿಸಲಾಗುತ್ತದೆ. ರಾಜರ ಕಾಲದಿಂದಲೂ ಕೂಡ ಸಂಗೀತ, ನಾಟ್ಯ, ವಿವಿಧ ಕಲೆಗಳಿಗೆ ಪ್ರೋತ್ಸಾಹಿಸಲಾಗುತ್ತಿತ್ತು. ಈ ಪರಂಪರೆಯನ್ನು ಸರ್ಕಾರವೂ ಮುಂದುವರೆಸಿಕೊಂಡು ಬಂದಿದೆ. ಸಂಗೀತ ಸಾಹಿತ್ಯ ಕಲೆಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಅಪ್ರತಿಮ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಕರ್ತವ್ಯ. ಈ ಬಾರಿ ಸರ್ಕಾರ ದಸರಾ ಉತ್ಸವವನ್ನು ವೈಭವಯುತವಾಗಿ ಆಯೋಜಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.