ಬೆಂಗಳೂರು: ತಾವು ಸಕ್ರಿಯ ರಾಜಕಾರಣದಲ್ಲಿ ಇಲ್ಲದಿದ್ದರೂ ನಿರಂತರವಾಗಿ ತಮ್ಮ ಹಾಗೂ, ತಮ್ಮ ಸಮುದಾಯದ, ಕುಟುಂಬದ ವಿರುದ್ಧ Bjp ಅವಹೇಳನಕಾರಿ ಕೋಮುವಾದಿ ಹೇಳಿಕೆ ನೀಡುತ್ತಿದೆ ಎಂದು ಆರೋಪಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ನೋಡಿ; https://x.com/TabbuRao/status/1842206348928336335?t=C8ayVap20s71IwSXkio0iQ&s=19
ಕೆಲವೊಮ್ಮೆ ಮಹಿಳೆಯರ ಮೇಲೆ ಹಲ್ಲೆ ಮಾಡಿದರೆ ಅದು ತಪ್ಪೇ. ಅದು ಕ್ಷುಲ್ಲಕವಾದರೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು, ನಿಂದಿಸುವುದು ಮಹಾ ತಪ್ಪು, bjp ಮತ್ತು ಅದರ ಸಾಮಾಜಿಕ ಜಾಲತಾಣದಲ್ಲಿ ತನ್ನ ಹಾಗೂ ತಮ್ಮ ಸುಮುದಾಯದ ಬಗ್ಗೆ ಹೀನಾಯವಾಗಿ ನಿಂದಿಸಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಅವರನ್ನು ಉಲ್ಲೇಖಿಸಿದ್ದಾರೆ.
ಈ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರಿಗೆ ಪತ್ರ ಬರೆದು, bjp ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇತ್ತಿಚೆಗೆ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಅವರ ಮನೆ ಅರ್ಧ ಪಾಕಿಸ್ತಾನದಂತಿದೆ ಎಂಬ ಹೇಳಿಕೆ ನೀಡಿದ್ದು, ತೀವ್ರ ಟೀಕೆಗೆ ಕಾರಣವಾಗಿತ್ತು. ಅಲ್ಲದೇ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆಯೂ ದಾಖಲಾಗಿದೆ.
ಇದನ್ನೂ ಓದಿ; Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!