ಕೊರಟಗೆರೆ: ಖಾಸಗಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ (Accident) ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿ ಸಮೀಪ ನಡೆದಿದೆ.
ಖಾಸಗಿ ಬಸ್ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿರುವ ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ತೆರಳುತ್ತಿತ್ತು. ಈ ವೇಳೆ ಬೆಂಗಳೂರು ಕಡೆಯಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.
ಕಾರಿನಲ್ಲಿದ್ದ ನಾಲ್ವರು ಬೆಂಗಳೂರಿನಿಂದ ಅಕ್ಕಿರಾಂಪುರ ಸಂತೆಗೆ ಕುರಿಗಳನ್ನು ಕೊಳ್ಳಲು ಬರುತ್ತಿದ್ದರು ಎನ್ನಲಾಗಿದೆ. ಅಪಘಾತದ (Accident) ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ; ನಿಜವಾಗುತ್ತಿದೆ ಅಭಿಮಾನಿಗಳ ನಂಬಿಕೆ.. Darshan ಪರ ವಕೀಲರ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಕಕ್ಕಾಬಿಕ್ಕಿ
ಸ್ಥಳಕ್ಕೆ ಕೊರಟಗೆರೆ ಠಾಣೆಯ ಇನ್ಸ್ಪೆಕ್ಟರ್ ಅನಿಲ್, ಕೋಳಾಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.