ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ (Grama panchayath) ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ‘ಬಿ’ ದರ್ಜೆಗೆ ಉನ್ನತೀಕರಿಸುವುದು, 7 ವರ್ಷ ಸೇವೆ ಪೂರೈಸಿದ ಪಿಡಿಒಗಳನ್ನು ಬೇರೆ ತಾಲೂಕುಗಳಿಗೆ ವರ್ಗಾವಣೆ ನಿಯಮ ಕೈ ಬಿಡುವುದು ಸೇರಿದಂತೆ ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಎಲ್ಲ ಪಂಚಾಯಿತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟು, ಗ್ರಾಮಪಂಚಾಯಿತಿ ಸೇವೆಗಳು ಬಹುತೇಕ ಸ್ಥಗಿತಗೊಂಡಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾಮಪಂಚಾಯಿತಿ (Grama panchayath) ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೇವೆಯಿಂದ ದೂರು ಉಳಿದ ನೌಕರರು ಸಾವಿರಾರು ಸಂಖ್ಯೆಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ ಆಗಮಿಸಿದ್ದಾರೆ. ರಾಜ್ಯದ 6 ಸಾವಿರಕ್ಕೂ ಹೆಚ್ಚು ಪಂಚಾಯಿತಿಗಳ ಸೇವೆ ಶುಕ್ರವಾರದಿಂದ ಸ್ಥಗಿತಗೊಂಡಿದೆ. ಕೆಲವು ಪಂಚಾಯಿತಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.
ವಿವಿಧ ಕೆಲಸಕ್ಕಾಗಿ ಗ್ರಾಪಂ ( Grama panchayath), ತಾಪಂಗಳಿಗೆ ಆಗಮಿಸುವ ಜನಸಾಮಾನ್ಯರು ಪರದಾಡುವಂತಾಯಿತು.
ಇದನ್ನೂ ಓದಿ; Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಗ್ರಾಮ ಸ್ವರಾಜ್ ಹಾಗೂ ವಿಕೇಂದ್ರೀಕರಣ ವ್ಯಸ್ಥೆಯಲ್ಲಿ ರಾಜ್ಯದ ಶೇ. 70 ರಷ್ಟು ಜನರಿಗೆ ಸೇವೆ ಒದಗಿಸುತ್ತಿರುವ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ.
ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಎಲ್ಲ ಸಮಸ್ಯೆಗಳಿಗೆ ಪಂಚಾಯತಿ ಅಧಿಕಾರಿಗಳನ್ನು ಹೊಣೆಗಾರನ್ನಾಗಿ ಮಾಡುತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸುತ್ತೆವೆ. ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮಕೈಗೊಳ್ಳಬೇಕು.
ಕುಂದು ಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸವುದು. ತಜ್ಞರ ಸಮಿತಿ ನೇಮಿಸುವುದು ಹಾಗೂ ಏಕರೂಪದ ಅಡಿಟ್ ಪದ್ಧತಿ ಜಾರಿಗಳಿಸಬೇಕು. ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರಬೇಕು. ತಂತ್ರಾಂಶಗಳಿಗೆ ಏಕರೂಪದ ಸಹಾಯವಾಣಿ ವ್ಯವಸ್ಥೆಗೆ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.
ವಿವಿಧ ಬೇಡಿಕೆಗಳು
ವಸತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆ ಸೃಜನೆ ಮಾಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿ ಮಾಡಬೇಕು.
ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರಘಂಟಿ, ಜವಾನರು ಹಾಗೂ ಸ್ವಚ್ಚತಗಾರರ ವೇತನ ಹಾಗೂ ಸೇವಾ ಹಿರಿತನದ ವೇತನ ಜಾರಿ ಮಾಡಿ ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಆರ್‌ಡಿಪಿಆರ್ ಇಲಾಖೆಯಿಂದ ವೇತನ ನಿಗದಿ ಪಡಿಸಬೇಕು.
ಆರೋಗ್ಯ ವಿಮೆ 5 ಲಕ್ಷ ಜಾರಿಮಾಡಬೇಕು. ಗ್ರೇಡ್-1 ಮತ್ತು ಗ್ರೇಡ್-2 ಕಾರ್ಯದರ್ಶಿಗಳ ಪದೋನ್ನತಿ, ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾ.ಪಂಗಳನ್ನು ಗ್ರೇಡ್-1 ಗ್ರಾಮ ಪಂಚಾಯಿತಿಯಾಗಿ ಮೇಲ್ದರ್ಜೇಗೆ ಏರಿಸಬೇಕು.
ಕೆ.ಡಿ.ಪಿ ಸಭೆಗೆ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸುವಂತೆ ಮಾಡುವುದು. ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಲಾಂಛನ ಸೃಜಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯವಾಗಿದೆ.
ಪಿಡಿಒ, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇ ಟರ್, ನೀರಗಂಟಿ, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮ ಪಂ ಚಾಯತ್ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ವಾಟ್ಸಪ್ ಚಾನೆಲ ಸೇರಲು ಈ ಲಿಂಕ್ ಬಳಸಿ; https://whatsapp.com/channel/0029Va5azA9GufIxBBdKdG0A