2ನೇ ದಿನಕ್ಕೆ ಕಾಲಿಟ್ಟ ಗ್ರಾಮಪಂಚಾಯಿತಿ ನೌಕರರ ಧರಣಿ: ಪಂಚಾಯಿತಿಗಳ ಸೇವೆ ಸ್ಥಗಿತ| Grama panchayath

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ (Grama panchayath) ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ‘ಬಿ’ ದರ್ಜೆಗೆ ಉನ್ನತೀಕರಿಸುವುದು, 7 ವರ್ಷ ಸೇವೆ ಪೂರೈಸಿದ ಪಿಡಿಒಗಳನ್ನು ಬೇರೆ ತಾಲೂಕುಗಳಿಗೆ ವರ್ಗಾವಣೆ ನಿಯಮ ಕೈ ಬಿಡುವುದು ಸೇರಿದಂತೆ ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಎಲ್ಲ ಪಂಚಾಯಿತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟು, ಗ್ರಾಮಪಂಚಾಯಿತಿ ಸೇವೆಗಳು ಬಹುತೇಕ ಸ್ಥಗಿತಗೊಂಡಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾಮಪಂಚಾಯಿತಿ (Grama panchayath) ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಸೇವೆಯಿಂದ ದೂರು ಉಳಿದ ನೌಕರರು ಸಾವಿರಾರು ಸಂಖ್ಯೆಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ ಆಗಮಿಸಿದ್ದಾರೆ‌. ರಾಜ್ಯದ 6 ಸಾವಿರಕ್ಕೂ ಹೆಚ್ಚು ಪಂಚಾಯಿತಿಗಳ ಸೇವೆ ಶುಕ್ರವಾರದಿಂದ ಸ್ಥಗಿತಗೊಂಡಿದೆ. ಕೆಲವು ಪಂಚಾಯಿತಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.

ವಿವಿಧ ಕೆಲಸಕ್ಕಾಗಿ ಗ್ರಾಪಂ ( Grama panchayath), ತಾಪಂಗಳಿಗೆ ಆಗಮಿಸುವ ಜನಸಾಮಾನ್ಯರು ಪರದಾಡುವಂತಾಯಿತು.

ಇದನ್ನೂ ಓದಿ; Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಗ್ರಾಮ ಸ್ವರಾಜ್‌ ಹಾಗೂ ವಿಕೇಂದ್ರೀಕರಣ ವ್ಯಸ್ಥೆಯಲ್ಲಿ ರಾಜ್ಯದ ಶೇ. 70 ರಷ್ಟು ಜನರಿಗೆ ಸೇವೆ ಒದಗಿಸುತ್ತಿರುವ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ.

ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಎಲ್ಲ ಸಮಸ್ಯೆಗಳಿಗೆ ಪಂಚಾಯತಿ ಅಧಿಕಾರಿಗಳನ್ನು ಹೊಣೆಗಾರನ್ನಾಗಿ ಮಾಡುತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸುತ್ತೆವೆ. ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮಕೈಗೊಳ್ಳಬೇಕು.

ಕುಂದು ಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸವುದು. ತಜ್ಞರ ಸಮಿತಿ ನೇಮಿಸುವುದು ಹಾಗೂ ಏಕರೂಪದ ಅಡಿಟ್ ಪದ್ಧತಿ ಜಾರಿಗಳಿಸಬೇಕು. ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರಬೇಕು. ತಂತ್ರಾಂಶಗಳಿಗೆ ಏಕರೂಪದ ಸಹಾಯವಾಣಿ ವ್ಯವಸ್ಥೆಗೆ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.

ವಿವಿಧ ಬೇಡಿಕೆಗಳು

ವಸತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆ ಸೃಜನೆ ಮಾಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿ ಮಾಡಬೇಕು.

ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರಘಂಟಿ, ಜವಾನರು ಹಾಗೂ ಸ್ವಚ್ಚತಗಾರರ ವೇತನ ಹಾಗೂ ಸೇವಾ ಹಿರಿತನದ ವೇತನ ಜಾರಿ ಮಾಡಿ ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಆರ್‌ಡಿಪಿಆ‌ರ್ ಇಲಾಖೆಯಿಂದ ವೇತನ ನಿಗದಿ ಪಡಿಸಬೇಕು.

ಆರೋಗ್ಯ ವಿಮೆ 5 ಲಕ್ಷ ಜಾರಿಮಾಡಬೇಕು. ಗ್ರೇಡ್-1 ಮತ್ತು ಗ್ರೇಡ್-2 ಕಾರ್ಯದರ್ಶಿಗಳ ಪದೋನ್ನತಿ, ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾ.ಪಂಗಳನ್ನು ಗ್ರೇಡ್-1 ಗ್ರಾಮ ಪಂಚಾಯಿತಿಯಾಗಿ ಮೇಲ್ದರ್ಜೇಗೆ ಏರಿಸಬೇಕು.

ಕೆ.ಡಿ.ಪಿ ಸಭೆಗೆ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸುವಂತೆ ಮಾಡುವುದು. ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಲಾಂಛನ ಸೃಜಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯವಾಗಿದೆ.

ಪಿಡಿಒ, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇ ಟರ್, ನೀರಗಂಟಿ, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮ ಪಂ ಚಾಯತ್ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ವಾಟ್ಸಪ್ ಚಾನೆಲ ಸೇರಲು ಈ ಲಿಂಕ್ ಬಳಸಿ; https://whatsapp.com/channel/0029Va5azA9GufIxBBdKdG0A

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಗುಡುಗು ಮಿಂಚು ಸಹಿತ ಬಿಳುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ Harithalekhani

[ccc_my_favorite_select_button post_id="105609"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!