ದೊಡ್ಡಬಳ್ಳಾಪುರ: ನವರಾತ್ರಿಯ ಕೊನೆಯ ಹಾಗೂ 9ನೇ ದಿನವಾದ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.
ವಿಶೇಷವಾಗಿ ದುರ್ಗಾದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ, ಆಯುಧಗಳಿಗೆ ಪೂಜೆ ಸಲ್ಲಿಸಲಾಯಿತು.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕರಾದ ಎಂ.ನಾರಾಯಣಸ್ವಾಮಿ ಹಾಗೂ ಪ್ರಧಾನ ಅರ್ಚಕರಾದ ಆರ್.ಸುಬ್ರಮಣ್ಯ ಮತ್ತು ಅರ್ಚಕರು ಸಿಬ್ಬಂದಿ ವರ್ಗದವರು ಹಾಜರಿದ್ದರು.