ಹರಿತಲೇಖನಿ

Doddaballapura: ನಳಂದ ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!

ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಯಾದ ನಳಂದ ಪ್ರೌಢಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಜಿ.ಸಿ ಕರ್ನಾಟಕ ಸರ್ಕಾರದ ವತಿಯಿಂದ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಹಂತ ಹಂತವಾಗಿ ತಾಲೂಕು, ಜಿಲ್ಲೆ ,ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ

ನಿನ್ನೆ ಸಿರಿಗೆರೆಯಲ್ಲಿ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಚಿತ್ರದುರ್ಗದ ಸಿರಿಗೆರೆ ಸ್ವಾಮಿಗಳಿಂದ ಪದಕವನ್ನು ಪಡೆದ ರಾಜ್ಯದ ಹೆಮ್ಮೆಯ ವಿದ್ಯಾರ್ಥಿಯಾಗಿದ್ದಾನೆ.

ಈ ಬಾಲ ಪ್ರತಿಭೆಯು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ದಸರಾ ಯೋಗ ಸ್ಪರ್ಧೆಯಲ್ಲಿಯೂ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಹೃತಿಕ್ ಜಿ. ಸಿ ಯ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.

ಮೈಸೂರಿನಲ್ಲಿ ರಾಜ್ಯಮಟ್ಟದ ದಸರಾ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಹೃತಿಕ್ ಜಿ ಸಿ.

ಹೃತಿಕ್ ಜಿ. ಸಿ ಸಾಧನೆಗೆ ಶಾಲೆಯ ಕಾರ್ಯದರ್ಶಿ ಅನುರಾಧ ಕೆ.ಆರ್ ಅವರು ಸಂತಸವನ್ನು ವ್ಯಕ್ತಪಡಿಸಿ, ಹೃತಿಕ್ ಜಿ.ಸಿ ಯು ಅದ್ಭುತವಾದ ಬಾಲ ಪ್ರತಿಭೆಯಾಗಿದ್ದು ಸತತ ಅಭ್ಯಾಸದಿಂದ ಭವಿಷ್ಯದಲ್ಲಿ ವಿಶ್ವಮಟ್ಟದಲ್ಲಿ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ಸುನಿತಾ.ಪಿ., ಅನಿತಾ ಕೆ.ಪಿ ಹಾಗೂ ಶಿಕ್ಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳು.
Exit mobile version