ಬೆಂಗಳೂರು: ಮೈಸೂರಿನಿಂದ ಬಿಹಾರದ ದರ್ಭಾಂಗ್‌ಗೆ ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಚೆನ್ನೈ ಸಮೀಪದ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ (TrainAccident).
ರಾತ್ರಿ ಸುಮಾರು 8.28ರ ವೇಳೆಗೆ ಘಟನೆ ನಡೆದಿದ್ದು, ಅಪಘಾತಕ್ಕೀಡಾಗುವ ವೇಳೆ ರೈಲು ಗಂಟೆಗೆ 75 ಕಿ.ಮಿ ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ. 8.27ಕ್ಕೆ ಪೊನ್ನೇರಿ ರೈಲು ನಿಲ್ದಾಣ ದಾಟಿದ್ದ ರೈಲಿಗೆ, ಕವರೈಪೆಟ್ಟೆ ನಿಲ್ದಾಣಕ್ಕೆ ಪ್ರವೇಶಿಸಿಲು ಗ್ರೀನ್ ಸಿಗ್ನಲ್ ನೀಡಲಾಗಿತ್ತು.
ನೀಡಿದ ಸಿಗ್ನಲ್ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು, ಲೂಪ್ ಹಳಿಗೆ ಪ್ರವೇಶಿಸಿ, ಆ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ (TrainAccident). ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ಹೇಳಿದೆ.
12-13 ಬೋಗಿಗಳು ಹಳಿ ತಪ್ಪಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಗೂಡ್ಸ್ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಶಾಮಕ ದಳವು ಬೆಂಕಿಯನ್ನು ನಂದಿಸಿದೆ.
ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ದಕ್ಷಿಣ ರೈಲ್ವೆಯಿಂದ ಬಂದಿಲ್ಲ. ಆದರೆ ತಮಿಳುನಾಡು ಸರ್ಕಾರದ ಮೂಲದಿಂದ ಬಂದ ಮಾಹಿತಿ ಪ್ರಕಾರ 19 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ತಿಳಿಸಿದ್ದಾರೆ.
Heartbreaking to hear about the train collision near Kavaraipettai, Thiruvallur. The Mysuru Darbhanga Express derailed after crashing into a goods train. Two compartments caught fire, & rescue efforts are ongoing. Prayers for all affected. #TrainAccident pic.twitter.com/oTRD6MeTFg
— Mutahir Showkat (@MutahirXYZ) October 11, 2024
ಆರಂಭಿಕ ವರದಿಗಳು ರೈಲು ಹಳಿಯಲ್ಲಿ ದೋಷವನ್ನು ಅನುಭವಿಸಿದ್ದು ಅಪಘಾತಕ್ಕೆ ಕಾರಣ ಎಂದು ಸೂಚಿಸುತ್ತದೆ. ಎಕ್ಸ್ ಪ್ರೆಸ್ ರೈಲು ಲೂಪ್ ಲೈನ್ ಪ್ರವೇಶಿಸಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ.