ರೈಲು ಅಪಘಾತ: ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೂ ಎಷ್ಟು ಕುಟುಂಬ ಬಲಿಯಾಗಬೇಕು; ರಾಹುಲ್ ಗಾಂಧಿ ಕಿಡಿ

ನವದೆಹಲಿ: ನಿನ್ನೆ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಪದೇ ಪದೇ ಸಂಭವಿಸುತ್ತಿರುವ ರೈಲುಗಳ ಅಪಘಾತ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಶುಕ್ರವಾರ ಸಂಜೆ ಮೈಸೂರಿನಿಂದ ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನ KSR ರೈಲ್ವೆ ನಿಲ್ದಾಣ ದಾಟಿ ಹೋಗ್ತಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಪೆರಂಬೂರು ದಾಟಿದ್ದ ರೈಲು, ದರ್ಬಾಂಗದತ್ತ ಪ್ರಯಾಣ ಬೆಳೆಸಿತ್ತು. ಆದ್ರೆ, 75 ಕಿಲೋಮೀಟರ್‌ ವೇಗದಲ್ಲಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲು, ಕಾವರಪೇಟ್ಟೈ ತಲುಪುತ್ತಿದ್ದಂತೆ ಲೂಪ್‌ ಲೇನ್‌ನಲ್ಲಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿತ್ತು.

ಪೆರಂಬೂರು ದಾಟಿ ಕಾವರಪೇಟ್ಟೈಗೆ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಕಾವರ ಪೇಟ್ಟೈ ರೈಲು ನಿಲ್ದಾಣದಲ್ಲಿ ಮುಖ್ಯ ಲೇನ್‌ಗೆ ಹೋಗುವಂತೆ ಸೂಚನೆ ಸಿಗ್ನಲ್‌ ನೀಡಿದ್ರು. ಆದರೆ, ಮೇನ್‌ ಲೇನ್‌ಗೆ ಸಿಗ್ನಲ್‌ ಇದ್ದರೂ ಗೂಡ್ಸ್‌ ರೈಲು ನಿಂತಿದ್ದ ಲೂಪ್‌ ಲೇನ್‌ ಟ್ರ್ಯಾಕ್‌ಗೆ ನುಗ್ಗಿತ್ತು. ಗೂಡ್ಸ್ ರೈಲಿಗೆ ಗುದ್ದಿದ ರಭಸಕ್ಕೆ, 75 km ವೇಗದಲ್ಲಿ ಗೂಡ್ಸ್‌ ರೈಲಿಗೆ ಡಿಕ್ಕಿ ಆಗಿದೆ. ಡಿಕ್ಕಿಯಾದ ರಭಸಕ್ಕೆ ರೈಲಿನ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಎಕ್ಸ್‌ಪ್ರೆಸ್‌ ರೈಲಿನಲ್ಲಿದ್ದ ಎಲ್ಲರಿಗೂ ಭೂಕಂಪನದ ಅನುಭವವಾಗಿದೆ. 12ರಿಂದ 13 ಬೋಗಿಗಳು ಹಳಿ ತಪ್ಪಿ ಅಕ್ಕಪಕ್ಕಕ್ಕೆ ಬಂದು ಬಿದ್ದಿದೆ.

ಈ ಕುರಿತು ಟ್ವಿಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಮೈಸೂರು-ದರ್ಭಾಂಗ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಪ್ರತಿಬಿಂಬಿಸುತ್ತದೆ – ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ, ಕೇಂದ್ರ ಸರ್ಕಾರ ಯಾವುದೇ ಪಾಠಗಳನ್ನು ಕಲಿತಿಲ್ಲ. ದುರ್ಘಟನೆಯಾಗದಂತೆ ಮುಂಜಾಗ್ರತೆ ವಹಿಸುತ್ತಿಲ್ಲ.. ಈ ಸರಕಾರ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!