ದೊಡ್ಡಬಳ್ಳಾಪುರ: ಮೈಸೂರಿನ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ತಬ್ದ ಚಿತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಕಡೆಗಣಿಸಲಾಗಿರುವುದು ವಿಪರ್ಯಾಸ ಎಂದು ಬಿಜೆಪಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಹೇಳಿದ್ದಾರೆ.
ನಿನ್ನೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ತಬ್ದ ಚಿತ್ರದಲ್ಲಿ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಐತಿಹಾಸಿಕ ಸ್ಥಳಕ್ಕೆ ಮಾತ್ರ ಮನ್ನಣೆ ನೀಡಲಾಗಿದ್ದು ದೊಡ್ಡಬಳ್ಳಾಪುರವನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರಗಳಿವೆ ಇವುಗಳಿಗೆ ಮನ್ನಣೆ ನೀಡದೆ ಇರುವುದು ತಾಲೂಕಿನ ಜನರ ಭಾವನೆ ದಕ್ಕೆಯನ್ನು ತಂದಂತ್ತಾಗಿದೆ. ದೊಡ್ಡಬಳ್ಳಾಪುರ ಕೂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದೆ ಎಂಬುದನ್ನು ಅಧಿಕಾರಿ ಮರೆಯಬಾರದು.
ಅಧಿಕಾರಿಗಳ ವೈಪಲ್ಯವೋ, ಸರ್ಕಾರದ ಷಡ್ಯಂತ್ರವೋ ಮತ್ತೆ ದೊಡ್ಡಬಳ್ಳಾಪುರಕ್ಕೆ ಈ ರೀತಿಯ ಅವಮಾನವಾಗದಂತೆ ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಅಶ್ವಥ್ ನಾರಾಯಣ ಕುಮಾರ್ ಅವರು ಆಗ್ರಹಿಸಿದ್ದಾರೆ.