![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಅಕ್ಟೋಬರ್ 17 ರಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಆರೆಂಜ್ ಅಲರ್ಟ್: ಅಕ್ಟೋಬರ್ 17 ರ ಬೆಳಗ್ಗೆಯಿಂದ 18 ರ ಬೆಳಗಿನ ಜಾವದವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೆ ಪ್ರತ್ಯೇಕವಾಗಿ ಅಕ್ಟೋಬರ್ 15 ರಿಂದ 17ರ ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ ಎಂದು ವರದಿ ತಿಳಿಸಿದೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)