ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್ ವಾಹನ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ಬಳಿಯ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯಲ್ಲಿ 9 ಮಂದಿಗೆ ಗಾಯಗಳಾಗಿವೆ.
ಬೆಂಗಳೂರಿನಿಂದ ಹೊರನಾಡಿಗೆ ತೆರಳಿ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಮುಗಿಸಿ ವಾಪಸಾಗುತ್ತಿದ್ದ ಟಿಟಿ ವಾಹನ ಮೂಡಿಗೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿ ಈ ವೇಳೆ 15 ಪ್ರಯಾಣಿಕರಿದ್ದರು.
ಅಪಘಾತದಲ್ಲಿ 9 ಮಂದಿಗೆ ಗಾಯಗಳಾಗಿವೆ ಎನ್ನಲಾಗಿದ್ದು, ಗಾಯಾಳುಗಳನ್ನು ಕಳಸ ಹಾಗೂ ಮೂಡಿಗೆರೆಯ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಕುರಿತು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.