ಬೆಂಗಳೂರು; ವ್ಯಕ್ತಿಯೋರ್ವನ ಕೊಲೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದ್ದು, ಬೇಲ್ ನೀಡಲು ನಿರಾಕರಿಸಿದೆ.
ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿರುವ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಅಂತೆಯೇ ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ಗೆ ಜಾಮೀನು ಮಂಜೂರಾಗಿಲ್ಲ. ಆದರೆ ರವಿಶಂಕರ್ ಮತ್ತು ದೀಪಕ್‌ಗೆ ಜಾಮೀನು ನೀಡಿ ಕೋರ್ಟ್ ಆದೇಶ ನೀಡಿದೆ ಎಂದು ವರದಿಯಾಗಿದೆ.
ಎರಡೂ ಕಡೆಯವರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.14ಕ್ಕೆ (ಇಂದು) ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ಗುರುವಾರ ತಿಳಿಸಿದ್ದರು.