ಚೇಳೂರು: ತಾಲ್ಲೂಕಿನ ಪುಲ್ಲಗಲ್ಲು ಗ್ರಾಮ ಪಂಚಾಯಿತಿ ನ ವ್ಯಾಪ್ತಿಯ ನಲ್ಲಸಾನಂಪಲ್ಲಿ ಗ್ರಾಮದಲ್ಲಿ ಹಾವು ಕಡಿದು ರೈತನ ಸಾವಿಗೀಡಾದ ಘಟನೆ ಶನಿವಾರ ನಡೆದಿದೆ.
52 ವರ್ಷದ ವೆಂಕಟರವಣ ಮೃತಪಟ್ಟ ರೈತ ಎಂದು ಗುರುತಿಸಲಾಗಿದೆ.
ಹೊಲದಲ್ಲಿ ಹಸುಗಳಿಗೆ ಹುಲ್ಲು ಕಟಾವು ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿದೆ. ಕುಟುಂಬದವರು ತಕ್ಷಣ ಚೇಳೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆದರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಂತಾಮಣಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.
ಚಿಂತಾಮಣಿ ಹೋದ ಸಂದರ್ಭದಲ್ಲಿ ಅಲ್ಲಿಯೂ ಯಾವ ಚಿಕಿತ್ಸೆ ಸಿಗದಿದ್ದಾಗ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಹೋಗಲು ತಿಳಿಸಿದ್ದು ಹದಿಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡ ರಾತ್ರಿ ಮೃತಪಟ್ಟಿದ್ದಾರೆ.
ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)