ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ನ ನಾಯಕ ಒಮರ್ ಅಬ್ದುಲ್ಲಾ (OmarAbdullah) ಪ್ರಮಾಣ ವಚನ ಸ್ವೀಕರಿಸಿದರು.
ಒಮರ್ ಅಬ್ದುಲ್ಲಾ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಶ್ರೀನಗರದ ಶೇರ್- ಎ- ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಮರ್ ಜೊತೆಗೆ ಐದು ಜನ ಶಾಸಕರು ಕೂಡ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂಡಿಯಾ ಒಕ್ಕೂಟದ ನಾಯಕರು ಉಪಸ್ಥಿತರಿದ್ದು, ಒಮರ್ ಅವರಿಗೆ ಶುಭಾಶಯ ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಎಎಪಿ ರಾಜ್ಯ ಸಭಾ ಸಂಸದ ಸಂಜಯ್ ಸಿಂಗ್, ಡಿಎಂಕೆ ಕನ್ನಿಮೋಳಿ, ಎನ್ಸಿಪಿ ಸುಪ್ರಿಯಾ ಸುಳೆ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಕೂಡ ಹಾಜರಿದ್ದರು.
ಅಬ್ಧುಲ್ಲಾ ಕುಟುಂಬದ ಮೂರನೇ ಪೀಳಿಗೆ ಒಮರ್ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಗಿ ಆಯ್ಕೆಗೊಂಡಿದ್ದಾರೆ.
ಈ ಹಿಂದೆ ಒಮರ್ ಅಬ್ದುಲ್ಲಾ (OmarAbdullah) ಅವರ ಅಜ್ಜ ಶೇಖ್ ಅಬ್ಧುಲ್ಲಾ ಮತ್ತು ತಂದೆ ಫಾರೂಕ್ ಅಬ್ದುಲ್ಲಾ ಕೂಡ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.