ದೊಡ್ಡಬಳ್ಳಾಪುರ; ರಸ್ತೆ ದಾಟುವ ವೇಳಸ ಅಪರಿಚಿತ ವಾಹನ ಡಿಕ್ಕಿ ಹೊಡೆದ (Accident) ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ರಸ್ತೆಯಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ಉತ್ತರ ಪ್ರದೇಶ ಮೂಲದ ಕಲುಚೌದರಿ ಎನ್ನಲಾಗುತ್ತಿದೆ.
ಬುಧವಾರ ರಾತ್ರಿ 9ರಿಂದ 9.30ರ ನಡುವಿನ ಸಮಯದಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಹಾಗೂ ನವೋದಯ ಶಾಲೆಯ ನಡುವಿನ ರಾಜ್ಯ ಹೆದ್ದಾರಿ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಲುಚೌದರಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಇದನ್ನೂ ಓದಿ: ಹೊಟ್ಟೆಪಾಡಿಗೆ ಜೊತೆಗಿರುವವರ ವಿಷಕಾರಿ ಮಾತು ನಂಬಬೇಡಿ: ಶಾಸಕ ಧೀರಜ್ ಮುನಿರಾಜುಗೆ ಕಾಂಗ್ರೆಸ್ ಮುಖಂಡರ ಸಲಹೆ
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.