Site icon ಹರಿತಲೇಖನಿ

heart attack: ವಾಲಿಬಾಲ್ ತರಬೇತಿ ವೇಳೆ ಶಿಕ್ಷಕನ ದುರ್ಮರಣ

ಸಾಗರ: ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ (heart attack) ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಸಾಗರದ ಬುಧವಾರ ನಡೆದಿದೆ.

Aravind, BLN Swamy, Lingapura

ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ 50 ವರ್ಷದ ಗಜಾನನ ಹಿರೇಮಠ ನಿಧನ ಹೊಂದಿದವರು.

ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿಕೊಂಡು ಜನಪ್ರಿಯರಾಗಿದ್ದರು. ಅವರು ಕಲಾಶಿಕ್ಷಕರಾಗಿ ಕೆಲಸಕ್ಕೆ ಸೇರಿದ್ದು, ಬಳಿಕ ಶಿಕ್ಷಣ ಸಂಸ್ಥೆಯ ಸಮನ್ವಯಕಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

Aravind, BLN Swamy, Lingapura

ಇದನ್ನೂ ಓದಿ: ದೊಡ್ಡಬಳ್ಳಾಪುರ: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ.. ಸ್ಥಳದಲ್ಲೇ ಸಾವು

ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಗಜಾನನ ಬುಧವಾರ ಬೆಳಗ್ಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ.

Exit mobile version