ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

Channel Gowda
Hukukudi trust

ಬೆಳಗಾವಿ: ಮನುಷ್ಯ ಮನುಷ್ಯನಾಗಿ ಬದುಕಲು ಮಹರ್ಷಿ ವಾಲ್ಮೀಕಿಯವರ ಆಚಾರ-ವಿಚಾರಗಳು ಅನುಸರಣೆ ಅಗತ್ಯವಾಗಿವೆ. ಇಂದಿನ ಯುವ ಸಮುದಾಯ‌ ವಾಲ್ಮೀಕಿಯವರ ತತ್ವಾದರ್ಶಗಳನ್ನು ಅನುಸರಿಸುವುದರ ಮೂಲಕ ಸಧೃಡ ಸಮಾಜ, ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮಣರಾವ ಚಿಂಗಳೆ ಅವರು ಹೇಳಿದರು.

hulukudi maharathotsava
Aravind, BLN Swamy, Lingapura

ಜಿಲ್ಲಾಡಳಿತ, ಜಿಲ್ಲಾ‌ ಪಂಚಾಯತ, ಮಹಾನಗರ ಪಾಲಿಕೆ, ಜಿಲ್ಲಾ‌‌ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ‌ ಸಹಯೋಗದಲ್ಲಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಗುರುವಾರ(ಅ.17) ಜರುಗಿದ ಮಹರ್ಷಿ ವಾಲ್ಮಿಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮಿಕಿ ಅವರು‌ ರಾಮಾಯಣ ರಚಿಸಿದಂತಹ ಮಹಾನ್ ವ್ಯಕ್ತಿಯಾಗಿದ್ದು, ಅವರು ರಚಿಸಿದ ಇನ್ನೂ‌ ಅನೇಕ‌ ಸಾಹಿತ್ಯಗಳ ಕುರಿತು ಅಧ್ಯಯನವಾಗಬೇಕಾಗಿದೆ. ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೇ ಮಹನೀಯರ ಆಚಾರ ವಿಚಾರಗಳನ್ನು ಜೀವನದಲ್ಲಿ‌ಅಳವಡಿಸಿಕೊಳ್ಳಬೇಕು.

Hulukudi mahajathre
Aravind, BLN Swamy, Lingapura

ಸಮಾಜ, ರಾಷ್ಟ್ರ‌ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣವು ಅತೀ‌ ಪ್ರಮುಖವಾದಂತಹ ಪಾತ್ರವನ್ನು ವಹಿಸುತ್ತದೆ. ಸರಕಾರವು ಪರಿಶಿಷ್ಟರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು‌‌ ಜಾರಿಗೊಳಿಸಿದೆ. ಈ ಯೋಜ‌ನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಮೂಲಕ ಸ್ವಾವಲಂಬಿಗಳಾಗಲು ಕರೆ ನೀಡಿದ‌ ಲಕ್ಷ್ಮಣರಾವ್ ಚಿಂಗಳೆ ಅವರು, ಮಹರ್ಷಿ ವಾಲ್ಕೀಕಿ ಅವರ ತತ್ವ ಸಿದ್ಧಾಂತ ಹಾಗೂ ವಿಚಾರಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಳಗಾವಿ ಉಪ ಮಹಾಪೌರರಾದ ಆನಂದ ಚವ್ಹಾಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಾಲ್ಮೀಕಿ ರಾಮಾಯಣಕ್ಕೆ ಧಕ್ಕೆ

ಕಾರ್ಯಕ್ರಮದ ಉಪನ್ಯಾಸಕರಾಗಿ ಆಗಮಿಸಿದ್ದ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ವೆಂಕಟಗಿರಿ ದಳವಾಯಿ‌ ಅವರು ಮಾತನಾಡಿ, ವಿಶ್ವಕ್ಕೆ ಮೊಟ್ಟ ಮೊದಲು ಮಹಾಕಾವ್ಯ ನೀಡಿದಂತಹ ಸಮುದಾಯ ವಾಲ್ಮಿಕಿ ಸಮುದಾಯವಾಗಿದ್ದರೂ ಸಹ ನಮ್ಮ‌ ಸಮುದಾಯ ಸಮಾಜದ ಮುಂಚೂಣಿಗೆ ಬರಲಾಗುತ್ತಿಲ್ಲ. ಈ ಕುರಿತು ಆತ್ಮಾವಲೋಕನ‌ ಮಾಡಿಕೊಳ್ಳುವದು ಅವಶ್ಯಕವಾಗಿದೆ ಎಂದರು.

ಪುರಾಣ, ಚರಿತ್ರೆ ಕಾಲದಲ್ಲಿಯೂ ನಮ್ಮ‌‌ ಸಮುದಾಯವಿತ್ತು. ಜಗತ್ತಿನಲ್ಲಿ ಬೇಡರಂತಹ ಶೂರರಿಬಹುದು ಆದರೆ ಅವರನ್ನು ಮೀರಿಸುವಂತಹವರು ಯಾರು ಇಲ್ಲ ಎಂಬ ವಿಲಿಯಂ ಷೇಕ್ಸಪಿಯರ್ ಅವರ ನುಡಿಗಳನ್ನು ಮೆಲಕು ಹಾಕಿದರು.

ರಾಮಾಯಣ ಮಹಾಕಾವ್ಯ ಸಮೃದ್ಧವಾದಂತಹ ಹಾಗೂ ಬುಡಕಟ್ಟು ಕಾವ್ಯವಾಗಿದೆ. ರಾಮಾಯಣದಲ್ಲಿ ಮನುಷ್ಯ, ವಾನರ ಹಾಗೂ ರಾಕ್ಷಸ ಲೋಕವನ್ನು ಪರಿಚಯಿಸಲಾಗಿದೆ. ವಾಲ್ಮಿಕಿ ಅವರು ಉತ್ತಮ‌ ಬಿಲ್ ವಿದ್ಯೆಗಾರ ಆಗಿದ್ದರು ಎಂದು ಅವರ ಜೀವನ ಹಾಗೂ ಬದುಕಿನ ಕುರಿತು ವಿವರಿಸಿದರು.

ರಾಮಾಯಣವನ್ನು ಬಿಡಿ ಬಿಡಿಯಾಗಿ ಓದುವುದರ ಮೂಲಕ‌ ವಾಲ್ಮಿಕಿ ರಾಮಾಯಣಕ್ಕೆ ಧಕ್ಕೆ ತರುವಂತಹ‌ ಕಾರ್ಯವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಡಾ.ಬಿ.ಆರ್‌.ಅಂಬೇಡ್ಕರ ಅವರು ನೀಡಿರುವ ಸಂವಿಧಾನದ ಮೂಲಕ ನಮ್ಮ‌ ಹಕ್ಕುಗಳನ್ನು ಪಡೆಯಬಹುದಾಗಿದೆ. ಜಯಂತಿಗಳ‌ ಸಂದರ್ಭದಲ್ಲಿ ಪ್ರತಿಯೊಬ್ಬರು ಸುಶಿಕ್ಷತರಾಗುವ ಸಂಕಲ್ಪವನ್ನು ತೋಡಬೇಕಾಗಿದೆ.

ಜ್ಞಾನ, ಶಿಕ್ಷಣ ಹಾಗೂ ಸಂಘಟನೆ ಮೂಲಕ ಗುರಿ ತಲುಪಬಹುದಾಗಿದ್ದು, ಎಲ್ಲ ಮಹಿಳೆಯರಿಗೂ ಉತ್ತಮ ಶಿಕ್ಷಣ‌ ನೀಡುವುದರ‌ ಮೂಲಕ ಸಮಾಜ ಹಾಗೂ ರಾಷ್ಟ್ರವನ್ನು ಸದೃಢ ಮಾಡಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ ರಚಿಸಿದಂತಹ‌ ಸಂವಿಧಾನ ಶಕ್ತಿಶಾಲಿಯಾಗಿದ್ದು, ಸಂವಿಧಾನದ ಬೆಳಕಿನಲ್ಲಿ ಎಲ್ಲ‌ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ನುಡಿದರು.

ಸಮಾಜದ ಮುಖಂಡರಾದ ಯಲ್ಲಪ್ಪ‌ ಕೊಲೇಕರ ಅವರು ಮಾತನಾಡಿ, ವಾಲ್ಮೀಕಿ ಸಮಾಜ ಧೈರ್ಯಕ್ಕೆ ಹೆಸರು ವಾಸಿಯಾದಂತಹ ಹಾಗೂ ಕೊಟ್ಟ ಮಾತನ್ನು ನಡೆಸಿ ಕೊಡುವಂತಹ ಸಮುದಾಯವಾಗಿದೆ. ಕಿತ್ತೂರು ರಾಣಿ ಚನ್ನಮ್ಮಾಜಿಗೆ ಕುದುರೆ ಸವಾರಿ ಕಲಿಸಿರುವುದು ನಮ್ಮ ವಾಲ್ಕೀಕಿ ಸಮುದಾಯವಾಗಿದೆ ಎಂದು‌ ತಿಳಿಸಿದರು.

ಜಿಲ್ಲಾ‌ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ ಅವರು ಮಾತನಾಡಿ, ಸಮಾಜದಲ್ಲಿ ಸಮುದಾಯವನ್ನು ಮುಂಚೂಣಿಗೆ ತರುವಲ್ಲಿ‌ ಶಿಕ್ಷಣದ ಪಾತ್ರ ಮಹತ್ವದಾಗಿದೆ. ಪ್ರತಿಯೊಬ್ಬರು ಉತ್ತಮ ಶಿಕ್ಷಣ‌ ಪಡೆಯುವಂತೆ ತಿಳಿಸಿದರು.

ಪ್ರತಿಭಾವಂತರಿಗೆ ಸನ್ಮಾನ

ಮಹರ್ಷಿ ವಾಲ್ಮೀಕಿ ಜಯಂತಿ ವೇದಿಕೆ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ವಾರ್ಷಿಕ‌ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ, ಪಿ.ಹೆಚ್.ಡಿ‌. ಪದವಿ‌ ಪಡೆದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರುಗಳಿಗೆ ಗಣ್ಯರುಗಳು‌ ಸತ್ಕರಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ನಗರ ಸೇವಕರು, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತ ಅಶೋಕ‌ ದುಡಗುಂಟಿ, ಜಿ.ಪಂ.ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಸಾಹಿತಿಗಳಾದ ಸರಜೂ ಕಾಟ್ಕರ, ಮಲ್ಲೇಶಿ ಚೌಗುಲೆ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು, ಗಣ್ಯರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಜಿಲ್ಲಾ‌ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಅಧಿಕಾರಿ ಬಸವರಾಜ ಕುರಿಹುಲಿ ಸ್ವಾಗತಿಸಿ,‌ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿನಾಯಕ‌‌ ಮೊರೆ‌ ಹಾಗೂ ತಂಡದವರು ನಾಡಗೀತೆ ಪ್ರಸ್ತುತಿಸಿದರು. ಕು.ಜ್ಯೋತಿ ಪ್ರಾರ್ಥಿಸಿದರು.

ಮಹರ್ಷಿ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆ

ಮಹರ್ಷಿ ವಾಲ್ಮಿಕಿ‌ ಜಯಂತಿ ಪ್ರಯುಕ್ತ ಜರುಗಿದ‌ ಮೆರವಣಿಗೆಗೆ ಜಿಲ್ಲಾಧಿಕಾರಿ‌‌ ಮೊಹಮ್ಮದ್ ರೋಷನ್ ಅವರು ನಗರದ ಕೋಟೆ ಆವರಣದಲ್ಲಿ ಅವರು ಚಾಲನೆ ನೀಡಿದರು.

ಮಹರ್ಷಿ ವಾಲ್ಮಿಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಗೌರವ ಸಮರ್ಪಣೆ ಸಲ್ಲಿಸುವ ಮೂಲಕ ಪ್ರಾರಂಭವಾದ ಮೆರವಣಿಗೆಯು ಕೋಟೆ ಕೆರೆ, ಅಶೋಕ ವೃತ್ತದ ಮೂಲಕ ಕುಮಾರ ಗಂಧರ್ವ ರಂಗ ಮಂದಿರಕ್ಕೆ ಬಂದು ಮುಕ್ತಾಯಗೊಂಡಿತು. ಮೆರವಣಿಗೆಗೆ ಪೂರ್ಣ ಕುಂಬ ಹೊತ್ತ ಮಹಿಳೆಯರು ಹಾಗೂ ವಿವಿಧ ಜಾನಪದ ಕಲಾತಂಡಗಳು ಮೆರಗು ತಂದವು.

ಈ ಸಂದರ್ಬದಲ್ಲಿ ಪೊಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ನಬ್ಯಾಂಗ್, ಜಿಲ್ಲಾ‌ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ‌ ಪಂಚಾಯತ ಸಿ.ಇ.ಓ ರಾಹುಲ‌, ಶಿಂಧೆ, ಜಿಲ್ಲಾ‌ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಅಧಿಕಾರಿ ಬಸವರಾಜ ಕುರಿಹುಲಿ ಸೇರಿದಂತೆ ಸಮಾಜದ ಮುಖಂಡರು, ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!