Site icon ಹರಿತಲೇಖನಿ

ಬೆಂ.ಗ್ರಾ.ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ‌ ಸರಳ ಆಚರಣೆ

Channel Gowda
Hukukudi trust

ಬೆಂಗಳೂರು ಗ್ರಾಮಾಂತರ ಜಿಲ್ಲೆ,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ (valmiki jayanti) ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಚರಿಸಲಾಯಿತು.

Aravind, BLN Swamy, Lingapura


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧಾ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರಾದ ವಿಠ್ಠಲ ಕಾವಳೆ

ದೇವನಹಳ್ಳಿ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪಾಂಡುರಂಗ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Aravind, BLN Swamy, Lingapura
Exit mobile version