ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಖಾದಿ ಗ್ರಾಮೋದ್ಯೋಗ ವಿಭಾಗದ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳು ಹಾಗೂ ಗ್ರಾಮ ಪಂಚಾಯಿತಿ ಧೃಡೀಕರಣದೊಂದಿಗೆ ನವ್ಹೆಂಬರ್ 30 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿ ಕಛೇರಿಗೆ ಸಲ್ಲಿಸಬಹುದಾಗಿದೆ.
ನಿಬಂದನೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.
ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಅದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು ವಿಚ್ಚೇದಿತರು, ಅನಾಥರು), ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Borewell repair/ Motor Rewinding steel fabrication, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಕ್ಷೌರಿಕ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್‌ಗಳನ್ನು ನೀಡುವ ಕಾರ್ಯಕ್ರಮ.
ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.