Astrology: Possibility of hearing good news

Astrological prediction: ಸೋಮವಾರ, ಅಕ್ಟೋಬರ್ 21, 2024, ದಿನ ಭವಿಷ್ಯ

ಮೇಷ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮ ವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ,ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿ ದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ.ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸ ಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ.ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಂಚಮಿ
ನಕ್ಷತ್ರ: ರೋಹಿಣಿ / ಮೃಗಶಿರಾ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಸಮ್ಮೇಳಾಧ್ಯಕ್ಷರಾದ ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಅವರನ್ನು ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಮ್ಮೇಳನ Kanasavadi

[ccc_my_favorite_select_button post_id="105216"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!